ಗದಗ: ರಾಜಣ್ಣ ಹೇಳಿಕೆಗೆ ನಾನು ಉತ್ತರ ನೀಡಲು ಹೋಗುವುದಿಲ್ಲ. ನಾನೊಂದು ಹೇಳಿದರೆ ನೀವೇ ಒಂದು ಬರೆಯುತ್ತೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗದಗದಲ್ಲಿ ನಡೆದ “ಕರ್ನಾಟಕ ಸಂಭ್ರಮ-50” ಅದ್ದೂರಿ ಕಾರ್ಯಕ್ರಮದ ಬಳಿಕ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಈ ವೇಳೆ, ಡಿಸಿಎಂ ಡಿಕೆ ಶಿವಕುಮಾರ್ ಸಹ ಇದ್ದರು.
ತುಮಕೂರಿನಲ್ಲಿ ಸಚಿವ ಕೆ ಎನ್ ರಾಜಣ್ಣ ಅವರು, ಜಿ ಪರಮೇಶ್ವರ್ಗೆ ಸಿಎಂ ಆಗುವ ಅವಕಾಶವಿದೆ. ಸಿದ್ದರಾಮಯ್ಯ ಹೊರತುಪಡಿಸಿದರೆ ಪರಮೇಶ್ವರ್ ಸಿಎಂ ಆಗಬೇಕು ಎಂದು ನಾವು ಬಯಸುತ್ತೇವೆ ಎಂಬ ಹೇಳಿಕೆಯನ್ನು ಮಾಧ್ಯಮದವರು ಸಿಎಂ ಸಿದ್ದರಾಮಯ್ಯ ಬಳಿ ಕೇಳಿದಾಗ, “ರಾಜಣ್ಣ ಹೇಳಿಕೆಗೆ ನಾನು ಉತ್ತರ ನೀಡಲು ಹೋಗುವುದಿಲ್ಲ. ನಾನು ಒಂದು ಹೇಳಿದರೆ ನೀವೇ ಒಂದು ಬರೆಯುತ್ತೀರಿ” ಎಂದು ಮಾಧ್ಯಮದವರ ಮೇಲೆ ಸಿಟ್ಟಾದರು.
ಮುಂದುವರೆದು, ಮುಖ್ಯಮಂತ್ರಿ ವಿಚಾರದಲ್ಲಿ ನಾನು ನಿನ್ನೆ ಹೈಕಮಾಂಡ್ ಏನು ಹೇಳುತ್ತದೆ ಅದಕ್ಕೆ ಬದ್ಧರಾಗಿರುತ್ತೇವೆ ಎಂದಿದ್ದೆ. ಅಷ್ಟೇ ಅಲ್ಲ ಇದು ಹೈಕಮಾಂಡ್ ಇರುವ ಪಕ್ಷ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.