Breaking News

ಹಾವೇರಿಯಲ್ಲಿ ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ

Spread the love

ಹಾವೇರಿ : ಅಣ್ಣನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಮೈದುನ ಪರಾರಿಯಾಗಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ.

ಕೊಲೆಗೀಡಾದವರನ್ನು ಗೀತಾ ಮರಿಗೌಡ್ರು(32) ಅಕುಲ್(10) ಮತ್ತು ಅಂಕಿತಾ(7) ಎಂದು ಗುರುತಿಸಲಾಗಿದೆ. ಕುಮಾರಗೌಡ್ ಮರಿಗೌಡ್ರು ಕೊಲೆಗೈದ ಆರೋಪಿ ಎಂದು ಗುರುತಿಸಲಾಗಿದೆ.

ಆರೋಪಿ ಕುಮಾರ್​ಗೌಡ್​​ ತನ್ನ ಸ್ವಂತ ಅಣ್ಣ ಹೊನ್ನೇಗೌಡರ ಹೆಂಡತಿ ಮತ್ತು ಮಕ್ಕಳ ಹತ್ಯೆಗೈದು ಪರಾರಿಯಾಗಿದ್ದಾನೆ. ಕೊಲೆಯಾದ ಗೀತಾ ಅವರ ಗಂಡ ಹೊನ್ನೇಗೌಡ ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಕುಟುಂಬದ ಆಂತರಿಕ ಜಗಳ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ. ಆರೋಪಿ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಸ್ಥಳಕ್ಕೆ ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೊಲೀಸ್​ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಪ್ರಕರಣ- ಬೆಳಗಾವಿಯಲ್ಲಿ ಗಂಡನ ಹತ್ಯೆಗೈದ ಪತಿ : ಕುಡಿತದ ಚಟಕ್ಕೆ ದಾಸನಾಗಿದ್ದ ಗಂಡನನ್ನು ಪತ್ನಿಯೇ ಹತ್ಯೆಗೈದಿದ್ದ ಘಟನೆ ಬೆಳಗಾವಿಯ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಮೃತ ವ್ಯಕ್ತಿಯನ್ನು ಬಾಬು ಕಲ್ಲಪ್ಪ ಕುರ್ಕಿ(48) ಎಂದು ಗುರುತಿಸಲಾಗಿತ್ತು. ಪತ್ನೊ ಮಹಾದೇವಿ ಕರ್ಕಿ ಕೊಲೆಗೈದ ಆರೋಪಿ.

ಮೃತ ಬಾಬು ಕಲ್ಲಪ್ಪ ಕುರ್ಕಿ ಕುಡಿತದ ಚಟಕ್ಕೆ ದಾಸನಾಗಿದ್ದನು. ಇದರಿಂದ ಪತ್ನಿ ಮಹಾದೇವಿ ಕರ್ಕಿ ಬೇಸತ್ತಿದ್ದಳು. ಈ ಸಂಬಂಧ ಪತಿಗೆ ನಿದ್ದೆ ಮಾತ್ರ ನೀಡಿ, ನಿದ್ದೆ ಬಂದ ಬಳಿಕ ಕುತ್ತಿಗೆಗೆ ಹಗ್ಗದಿಂದ ಬಿಗಿದು ಹತ್ಯೆ ಮಾಡಿದ್ದಾಳೆ. ಇದರಿಂದ ಬಾಬು ಉಸಿರುಗಟ್ಟಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ