Breaking News

50 ಶಾಸಕರು BJP ಹೈಕಮಾಂಡ್ ಸಂಪರ್ಕದಲ್ಲಿದ್ದಾರೆ – ಕಾಂಗ್ರೆಸ್‌ ಸರ್ಕಾರದ ಪತನ ಗ್ಯಾರಂಟಿ: ನಿರಾಣಿ ಬಾಂಬ್‌

Spread the love

ವಿಜಯಪುರ: ಕಾಂಗ್ರೆಸ್‌ (Congress) ಹೇಳುವುದು ಒಂದು ಮಾಡುವುದು ಇನ್ನೊಂದು, ಈ ಸರ್ಕಾರ 5 ವರ್ಷ ಉಳಿಯಲ್ಲ. ಈಗಾಗಲೇ 50 ಕಾಂಗ್ರೆಸ್‌ ಶಾಸಕರು ಬಿಜೆಪಿ ಹೈಕಮಾಂಡ್‌ (BJP HighCommand) ಸಂಪರ್ಕದಲ್ಲಿದ್ದು, ಪತನ ಆಗೋದು ಗ್ಯಾರಂಟಿ ಎಂದು ಮಾಜಿ ಸಚಿವ ಮುರುಗೇಶ್‌ ನಿರಾಣಿ (Murugesh Nirani) ಹೊಸ ಬಾಂಬ್‌ ಸಿಡಿಸಿದ್ದಾರೆ.ವಿಜಯಪುರದ ಜುಮನಾಳ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು‌, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ

ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕೆ ಎರಡು ಬಣವಿದ್ದರೂ, ಒಳಗೆ ನಾಲ್ಕು ಬಣ ಸೃಷ್ಟಿಯಾಗಿದೆ. 4 ಡಿಸಿಎಂ ಹುದ್ದೆ ಕೇಳುತ್ತಿದ್ದಾರೆ. ಸಿಎಂ ವಿಚಾರದಲ್ಲೂ ಗೊಂದಲ ಸೃಷ್ಟಿಯಾಗಿದೆ, ರಾಜ್ಯ ಸರ್ಕಾರವೇ (Government Of Karnataka) ಗೊಂದಲದಲ್ಲಿದೆ. ಈ ಸರ್ಕಾರ ಖಂಡಿತವಾಗಿಯೂ 5 ವರ್ಷ ಮುಂದುವರಿಯಲ್ಲ. 50 ಶಾಸಕರು ಬಿಜೆಪಿ ಹೈಕಮಾಂಡ್‌ ಸಂಪರ್ಕದಲ್ಲಿದ್ದಾರೆ. ಡಿಸಿಎಂ ಆಕಾಂಕ್ಷಿ ಸಚಿವರು, ಸಚಿವ ಸ್ಥಾನ ವಂಚಿತ ಶಾಸಕರು, ಅಸಮಾಧಾನಿತ ಶಾಸಕರು ಸಂಪರ್ಕದಲ್ಲಿದ್ದಾರೆ. ಅವರೇ ಬಂದು ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆ. ನಾವು ಸರ್ಕಾರ ಕೆಡವಲ್ಲ, ತಾನಾಗಿಯೇ ಪತನವಾಗುತ್ತೆ ಎಂದು ಭವಿಷ್ಯ ನುಡಿದಿದ್ದಾರೆ.

 

ಮುಂದುವರಿದು, ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಇದೆಯಾ ಅನ್ನೋದು ಗೊತ್ತಿಲ್ಲ. ಗ್ಯಾರಂಟಿಗಳ ಮೋಸದಿಂದ ಅಧಿಕಾರಕ್ಕೆ ಬಂದಿದ್ದಾರೆ. ಫ್ರೀ ಕರೆಂಟ್‌ ಕೊಡ್ತೀವಿ ಅಂತ ಈಗ ಪವರ್‌ ಕಟ್‌ ಮಾಡ್ತಿದ್ದಾರೆ. ಮಹಿಳೆಯರಿಗೆ ಫ್ರಿ ಬಸ್‌ ಅಂತ ಹೇಳಿ ಬಸ್‌ ಕಡಿಮೆ ಮಾಡಿದ್ದಾರೆ. ಹಿಂದಿನ ಸರ್ಕಾರದ ಕಾಮಗಾರಿಗಳೂ ನಡೆಯುತ್ತಿಲ್ಲ. ಹಣ ಕೊಟ್ಟರೆ ಮಾತ್ರ ಕೆಲಸ ಮಾಡ್ತಿದ್ದಾರೆ. ಒಟ್ಟಿನಲ್ಲಿ ಈ ರಾಜ್ಯದ ಜನರಿಗೆ ಕಾಂಗ್ರೆಸ್‌ ಮೋಸ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿ ವಿಚಾರಕ್ಕೆ ಪ್ರತಿಕ್ರಿಯಿಸಿ, ನನಗೆ ರಾಜ್ಯಾಧ್ಯಕ್ಷನಾಗುವ ಆಸೆಯಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ. ಅರ್ಹತೆಗೆ ಅನುಗುಣವಾಗಿ ಕೊಟ್ಟ ಕೆಲಸ ಮಾಡ್ತೇನೆ. ಟಿಕೆಟ್‌ ಕೊಡದೆ ಕಾರ್ಯಕರ್ತನಾಗಿ ಕೆಲಸ ಮಾಡು ಅಂದರೂ ಮಾಡ್ತೇನೆ ಎಂದು ಹೇಳಿದ್ದಾರೆ


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ