Breaking News

ಬರಪೀಡಿತ ಪಟ್ಟಿಗೆ ಮತ್ತೆ 7 ತಾಲೂಕುಗಳು ಸೇರ್ಪಡೆ: ರಾಜ್ಯ ಸರ್ಕಾರ ಆದೇಶ

Spread the love

ಬೆಂಗಳೂರು: ರಾಜ್ಯದಲ್ಲಿ ಬರದ ತೀವ್ರತೆ ದಿನ ದಿನಕ್ಕೆ ಹೆಚ್ಚಾಗುತ್ತಿದೆ. ಮತ್ತೆ ಏಳು ಹೆಚ್ಚುವರಿ ತಾಲೂಕುಗಳನ್ನು ಬರಪೀಡಿತ ಎಂದು ಶನಿವಾರ ಸರ್ಕಾರ ಘೋಷಿಸಿದೆ.

ಈ ಮೂಲಕ ರಾಜ್ಯದಲ್ಲಿ ಒಟ್ಟು 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದಂತಾಗಿದೆ.

ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020ರ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆಹಾನಿ ಸಮೀಕ್ಷೆಯ (Ground Truthing) ವರದಿಯನುಸಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಈಗಾಗಲೇ ಘೋಷಿಸಲಾಗಿದೆ.

ಈ ಕೈಪಿಡಿಯಲ್ಲಿ ಬರ ಪರಿಸ್ಥಿತಿ ಘೋಷಿಸಲು ಅನುಸರಿಸಬೇಕಾದ ಮಾನದಂಡಗಳನ್ನು ತಿಳಿಸಲಾಗಿದೆ. ಹಂತ-1ರಲ್ಲಿ ಮಳೆ ಕೊರತೆ (ಶೇ.50ಕ್ಕಿಂತ ಹೆಚ್ಚು) ಅಥವಾ ಸತತ ಮೂರು ವಾರಗಳ ಅಥವಾ ಅದಕ್ಕಿಂತ ಹೆಚ್ಚು ಶುಷ್ಕ ವಾತಾವರಣ (Dry Spell) ಕಂಡು ಬಂದಿರಬೇಕು. ಹಂತ-2 ರಲ್ಲಿ ತತ್ಪರಿಣಾಮ ಮಾನದಂಡಗಳಾದ ಕೃಷಿ ಬಿತ್ತನೆ ಪ್ರದೇಶ, ಉಪಗ್ರಹ ಆಧಾರಿತ ಬೆಳೆ ಆರೋಗ್ಯ ಸೂಚ್ಯಂಕ, ತೇವಾಂಶ ಕೊರತೆ (MAI) ಹಾಗೂ ನದಿಗಳಲ್ಲಿನ ಹರಿವು, ಜಲಾಶಯಗಳ ನೀರಿನ ಸಂಗ್ರಹಣೆ ಹಾಗೂ ಅಂತರ್ಜಲ ಮಟ್ಟ ಸೂಚ್ಯಂಕಗಳಲ್ಲಿನ ತೀವ್ರತೆಯನ್ನು ಆಧರಿಸಿ ಹೆಚ್ಚುವರಿಯಾಗಿ ಏಳು ತಾಲೂಕುಗಳು ಬರ ಪರಿಸ್ಥಿತಿ ಉದ್ಭವಿಸಿರುವ ತಾಲೂಕುಗಳೆಂದು ಗುರುತಿಸಲಾಗಿದೆ. ಅದರಂತೆ, ಜಿಲ್ಲಾಧಿಕಾರಿಗಳಿಂದ ಬೆಳೆ ಸಮೀಕ್ಷೆ ಬಗ್ಗೆ ವರದಿಯನ್ನು ಪಡೆದು ಪರಿಶೀಲಿಸಿ ಹೊಸದಾಗಿ ಏಳು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಆದೇಶಿಸಲಾಗಿದೆ. ಆ ಮೂಲಕ ರಾಜ್ಯದಲ್ಲಿನ ಒಟ್ಟು 236 ತಾಲೂಕುಗಳ ಪೈಕಿ 223 ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ.


Spread the love

About Laxminews 24x7

Check Also

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Spread the loveಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ  ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ