Breaking News
Home / ರಾಜಕೀಯ / ಬರಪೀಡಿತ ಪಟ್ಟಿಗೆ ಮತ್ತೆ 7 ತಾಲೂಕುಗಳು ಸೇರ್ಪಡೆ: ರಾಜ್ಯ ಸರ್ಕಾರ ಆದೇಶ

ಬರಪೀಡಿತ ಪಟ್ಟಿಗೆ ಮತ್ತೆ 7 ತಾಲೂಕುಗಳು ಸೇರ್ಪಡೆ: ರಾಜ್ಯ ಸರ್ಕಾರ ಆದೇಶ

Spread the love

ಬೆಂಗಳೂರು: ರಾಜ್ಯದಲ್ಲಿ ಬರದ ತೀವ್ರತೆ ದಿನ ದಿನಕ್ಕೆ ಹೆಚ್ಚಾಗುತ್ತಿದೆ. ಮತ್ತೆ ಏಳು ಹೆಚ್ಚುವರಿ ತಾಲೂಕುಗಳನ್ನು ಬರಪೀಡಿತ ಎಂದು ಶನಿವಾರ ಸರ್ಕಾರ ಘೋಷಿಸಿದೆ.

ಈ ಮೂಲಕ ರಾಜ್ಯದಲ್ಲಿ ಒಟ್ಟು 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದಂತಾಗಿದೆ.

ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020ರ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆಹಾನಿ ಸಮೀಕ್ಷೆಯ (Ground Truthing) ವರದಿಯನುಸಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಈಗಾಗಲೇ ಘೋಷಿಸಲಾಗಿದೆ.

ಈ ಕೈಪಿಡಿಯಲ್ಲಿ ಬರ ಪರಿಸ್ಥಿತಿ ಘೋಷಿಸಲು ಅನುಸರಿಸಬೇಕಾದ ಮಾನದಂಡಗಳನ್ನು ತಿಳಿಸಲಾಗಿದೆ. ಹಂತ-1ರಲ್ಲಿ ಮಳೆ ಕೊರತೆ (ಶೇ.50ಕ್ಕಿಂತ ಹೆಚ್ಚು) ಅಥವಾ ಸತತ ಮೂರು ವಾರಗಳ ಅಥವಾ ಅದಕ್ಕಿಂತ ಹೆಚ್ಚು ಶುಷ್ಕ ವಾತಾವರಣ (Dry Spell) ಕಂಡು ಬಂದಿರಬೇಕು. ಹಂತ-2 ರಲ್ಲಿ ತತ್ಪರಿಣಾಮ ಮಾನದಂಡಗಳಾದ ಕೃಷಿ ಬಿತ್ತನೆ ಪ್ರದೇಶ, ಉಪಗ್ರಹ ಆಧಾರಿತ ಬೆಳೆ ಆರೋಗ್ಯ ಸೂಚ್ಯಂಕ, ತೇವಾಂಶ ಕೊರತೆ (MAI) ಹಾಗೂ ನದಿಗಳಲ್ಲಿನ ಹರಿವು, ಜಲಾಶಯಗಳ ನೀರಿನ ಸಂಗ್ರಹಣೆ ಹಾಗೂ ಅಂತರ್ಜಲ ಮಟ್ಟ ಸೂಚ್ಯಂಕಗಳಲ್ಲಿನ ತೀವ್ರತೆಯನ್ನು ಆಧರಿಸಿ ಹೆಚ್ಚುವರಿಯಾಗಿ ಏಳು ತಾಲೂಕುಗಳು ಬರ ಪರಿಸ್ಥಿತಿ ಉದ್ಭವಿಸಿರುವ ತಾಲೂಕುಗಳೆಂದು ಗುರುತಿಸಲಾಗಿದೆ. ಅದರಂತೆ, ಜಿಲ್ಲಾಧಿಕಾರಿಗಳಿಂದ ಬೆಳೆ ಸಮೀಕ್ಷೆ ಬಗ್ಗೆ ವರದಿಯನ್ನು ಪಡೆದು ಪರಿಶೀಲಿಸಿ ಹೊಸದಾಗಿ ಏಳು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಆದೇಶಿಸಲಾಗಿದೆ. ಆ ಮೂಲಕ ರಾಜ್ಯದಲ್ಲಿನ ಒಟ್ಟು 236 ತಾಲೂಕುಗಳ ಪೈಕಿ 223 ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ.


Spread the love

About Laxminews 24x7

Check Also

ಬೆಂಗಳೂರು ರೇವ್‌ ಪಾರ್ಟಿ ಕೇಸ್‌; ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆದ ತೆಲುಗು ನಟಿ

Spread the love ಬೆಂಗಳೂರು: ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (electronic city) ಫಾರಂ ಹೌಸ್‌ನಲ್ಲಿ (Farm house) ನಡೆದಿದ್ದ ರೇವ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ