Breaking News

ಬಂಡೀಪುರ ಕಾಡಲ್ಲಿ ಗುಂಡಿನ ಚಕಮಕಿ: ಓರ್ವ ಬೇಟೆಗಾರ ಸಾವು

Spread the love

ಚಾಮರಾಜನಗರ: ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದು, ಓರ್ವ ಬೇಟೆಗಾರ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಚೆಕ್ ಪೋಸ್ಟ್ ಸಮೀಪ ನಡೆದಿದೆ.

ಮೃತರನ್ನು ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಯುವಕ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.

ಮದ್ದೂರು ಅರಣ್ಯ ವಲಯದಲ್ಲಿ 8-10 ಮಂದಿಯ ಗುಂಪು ಬೇಟೆಗೆ ಬಂದಿದ್ದರು. ಈ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತಿನಲ್ಲಿದ್ದರು. ಆಗ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ನಾಡಬಂದೂಕುಗಳಿಂದ ಕಳ್ಳಬೇಟೆಗೆ ಬಂದ ಗುಂಪು ದಾಳಿ ಮಾಡಲು ಮುಂದಾಗಿತ್ತು. ತಕ್ಷಣವೇ ಎಚ್ಚೆತ್ತ ಅರಣ್ಯ ಇಲಾಖೆ ಸಿಬ್ಬಂದಿ ಕೂಡ ಮರು ದಾಳಿಗೆ ಮುಂದಾಗಿದ್ದರು. ಈ ವೇಳೆ ಬೇಟೆಗೆ ಬಂದ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಂಡೀಪುರ ಸಿಎಫ್‌ಒ ರಮೇಶ್ ಕುಮಾರ್ ತಿಳಿಸಿದ್ದಾರೆ. ಕಡವೆ, ಕಾಡುಹಂದಿಗಳನ್ನು ಬೇಟೆಯಾಡಲು 8-10 ಜನರ ಗುಂಪು ಬಂದಿತ್ತು ಎನ್ನಲಾಗಿದೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ