Breaking News

ಕಳ್ಳನೊಂದಿಗೆ ಶಾಮೀಲಾಗಿ ರೈಲುಗಳಲ್ಲಿ ಕಳ್ಳತನ ಮಾಡುತ್ತಿದ್ದ ರೈಲ್ವೆ ಹೆಡ್​ಕಾನ್ಸ್​ಟೇಬಲ್​

Spread the love

ಬೆಂಗಳೂರು : ಬೇಲಿಯೇ ಎದ್ದು ಹೊಲ ಮೇಯ್ದಂತೆ ಖದೀಮರನ್ನ ಸದೆ ಬಡಿಯಬೇಕಾದ ರೈಲ್ವೇ ಹೆಡ್​ಕಾನ್ಸ್​ಟೇಬಲ್​ ಬಬ್ಬರನ್ನು ಕಳ್ಳನೊಂದಿಗೆ ಶಾಮೀಲಾಗಿ ರೈಲುಗಳಲ್ಲಿ ಕಳ್ಳತನವೆಸಗುತ್ತಿದ್ದ ಜಾಲವನ್ನ ಬೆಂಗಳೂರು ದಂಡು ರೈಲ್ವೇ ಪೊಲೀಸರು ಪತ್ತೆ ಹಚ್ಚಿದ್ದಾರೆ.

 

ಚಿಕ್ಕಬಳ್ಳಾಪುರ ರೈಲ್ವೆ ಹೊರ ಪೊಲೀಸ್ ಠಾಣೆಯಲ್ಲಿ ಹೆಡ್​ಕಾನ್ಸ್​ಟೇಬಲ್ ಆಗಿರುವ ಸಿದ್ದರಾಮರೆಡ್ಡಿ ಹಾಗೂ ಖದೀಮ ಸಾಬಣ್ಣ ಎಂಬುವರನ್ನ ಬಂಧಿಸಿ, ಪೊಲೀಸ್ ಕಸ್ಟಡಿ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ. 2011ರ ಬ್ಯಾಚ್ ಸಿಬ್ಬಂದಿಯಾಗಿದ್ದ ಸಿದ್ದರಾಮರೆಡ್ಡಿ, ರೈಲ್ವೇ ಹೆಡ್​ಕಾನ್ಸ್​ಟೇಬಲ್ ಆಗಿ ರಾಯಚೂರಿನಲ್ಲಿ ಸೇವೆಗೆ ಸೇರಿದ್ದರು. ಸಾಬಣ್ಣ ಸಹ ರಾಯಚೂರು ಮೂಲದವನಾಗಿದ್ದು, ಇಬ್ಬರ ನಡುವೆ ಪರಿಚಯವಾಗಿತ್ತು. ಕಾಲ ಕ್ರಮೇಣ ಹೆಡ್​ಕಾನ್ಸ್​ಟೇಬಲ್ ಆಗಿ ಬಡ್ತಿ ಪಡೆದು ಸಿದ್ದರಾಮ ಬೆಂಗಳೂರು ನಗರಕ್ಕೆ ವರ್ಗಾವಣೆ ಮಾಡಿಸಿಕೊಂಡಿದ್ದ. ಮತ್ತೊಂದೆಡೆ ಸಾಬಣ್ಣ ಬೆಂಗಳೂರಿನ ಚಿಕ್ಕಬಾಣವಾರ ಬಳಿ ಮನೆ ಮಾಡಿಕೊಂಡಿದ್ದ. ಈ ಮಧ್ಯೆ ಇಬ್ಬರ ನಡುವೆ ಸಂಪರ್ಕ ಬೆಸೆದುಕೊಂಡಿದ್ದರು.

ಕಾನ್ಸ್​ಟೇಬಲ್ ಸೂಚನೆ ಮೇರೆಗೆ ಕಳ್ಳತನ: ಕಳೆದ ಆಗಸ್ಟ್ 23ರಂದು ತ್ರಿಶೂರ್​ನಿಂದ ನಗರದ ಬೈಯ್ಯಪ್ಪನಹಳ್ಳಿಯ ಸರ್. ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣಕ್ಕೆ‌ ಬಂದಿದ್ದ ರೈಲಿನಲ್ಲಿ ನಿದ್ದೆಯ ಮಂಪರಿನಲ್ಲಿರುವಾಗಲೇ ಪ್ರಯಾಣಿಕರೊಬ್ಬರ ಬ್ಯಾಗ್​ನಲ್ಲಿದ್ದ 168 ಗ್ರಾಂ ಬಂಗಾರ, ಎರಡು ಮೊಬೈಲ್ ಕಸಿದು ಸಾಬಣ್ಣ ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಕಂಟೊನ್ಮೆಂಟ್ ರೈಲ್ವೇ ಪೊಲೀಸ್ ಠಾಣೆಯ ಇನ್​ಸ್ಪೆಕ್ಟರ್ ಎಂ ಜಿ ನಟರಾಜ್ ನೇತೃತ್ವದ ತಂಡ ತನಿಖೆ ಕೈಗೊಂಡಿತ್ತು. ಕೆ. ಆರ್ ಪುರ ರೈಲ್ವೇ ನಿಲ್ದಾಣ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಸಾಬಣ್ಣನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ‌ ಕೃತ್ಯವೆಸಗಿರುವ ಬಗ್ಗೆ ಬಾಯ್ಬಿಟ್ಟಿದ್ದಾ‌ನೆ.‌ ಕೃತ್ಯದಲ್ಲಿ ಹೆಡ್​ಕಾನ್ಸ್​ಟೇಬಲ್ ಭಾಗಿಯಾಗಿರುವ ಬಗ್ಗೆಯೂ ಬಾಯ್ಬಿಟ್ಟಿದ್ದಾನೆ.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ