Breaking News

5 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ 20 ವರ್ಷ ಕಠಿಣ ಶಿಕ್ಷೆ

Spread the love

ಚಾಮರಾಜನಗರ: ಹೆಂಡತಿ ಹೊರ ಹೋದ ವೇಳೆ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಮೈಸೂರಿನ ಗೌಸಿಯ ನಗರದ ನಿವಾಸಿ ಸೈಯದ್ ಮುಜಾಮಿಲ್(45) ಶಿಕ್ಷೆಗೊಳಗಾದ ಅಪರಾಧಿ. ಈತ ಮೂರು ಮದುವೆ ಯಾಗಿದ್ದು, ಮೊದಲ ಹೆಂಡತಿ ದೂರವಾಗಿದ್ದರೆ, ಎರಡನೇ ಹೆಂಡತಿ ಮೃತಪಟ್ಟಿದ್ದಳು. ಚಾಮರಾಜನಗರದ ಮೂಲದ ಮಹಿಳೆಯೊಬ್ಬರ ಜೊತೆ ಮೂರನೇ ವಿವಾಹವಾಗಿತ್ತು.

2022ರ ಜನವರಿ 4 ರಂದು ಅಪರಾಧಿ ಪತ್ನಿ ಮಕ್ಕಳನ್ನು ಮನೆಯಲ್ಲಿ ಬಿಟ್ಟು ಕುರಾನ್ ಪಠಿಸಲು ತೆರಳಿದ್ದ ವೇಳೆ 5 ವರ್ಷದ ಅಪ್ರಾಪ್ತೆ ಮೇಲೆ ಈತ ಅತ್ಯಾಚಾರ ಎಸಗಿದ್ದ. ಈ ಸಂಬಂಧ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವೈದ್ಯಕೀಯ ಪರೀಕ್ಷೆಗಳಿಂದ ಮುಜಾಮಿಲ್​ನ ಹೇಯಕೃತ್ಯ ಸಾಬೀತಾದ ಹಿನ್ನೆಲೆ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಜಿಲ್ಲಾ‌ ಮತ್ತು ಸತ್ರ ನ್ಯಾಯಾಧೀಶರಾದ ಎ‌.ಸಿ.ನಿಶಾರಾಣಿ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿದ್ದಾರೆ. ಜೊತೆಗೆ, ನೊಂದ ಬಾಲಕಿಗೆ ಪರಿಹಾರ ರೂಪದಲ್ಲಿ 6 ಲಕ್ಷ ರೂ. 30 ದಿನದೊಳಗೆ ಕೊಡಬೇಕು ಎಂದು ಕಾನೂನು ಸೇವಾ ಪ್ರಾಧಿಕಾರವು ಆದೇಶಿಸಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಯೋಗೇಶ್ ವಾದ‌ ಮಂಡಿಸಿದ್ದರು.

ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ್ದ ಅಪರಾಧಿಗೆ 20 ವರ್ಷ ಕಾರಾಗೃಹ ಶಿಕ್ಷೆ: ಇತ್ತೀಚಿಗೆ, ಅಪ್ರಾಪ್ತೆ ಅತ್ಯಾಚಾರ ಮಾಡಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣನಾದ ಅಪರಾಧಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ(ಎಫ್​ಟಿಎಸ್‌ಇ-1)(ಪೊಕ್ಸೊ) ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದರು. ಬಾಗಲಕೋಟೆ ಜಿಲ್ಲೆಯ ಹಾರ್ದೊಳ್ಳಿಯ ಶ್ರೀಕಾಂತ್ ಹನುಮಂತ ಎಂಬಾತನು ಶಿಕ್ಷೆಗೊಳಗಾದ ಅಪರಾಧಿ.

ಮಂಗಳೂರಿನ ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕರಂಬಾರು ಗ್ರಾಮದ ಬಾಕ್ಸ್ ಕಂಪನಿಯೊಂದರ ಶೆಡ್‍ನಲ್ಲಿ ಪರಿಶಿಷ್ಟ ಪಂಗಡದ ಬಾಲಕಿ ತನ್ನ ಪಾಲಕರೊಂದಿಗೆ ವಾಸವಿದ್ದಳು. ಅಲ್ಲಿಯೇ ಪಕ್ಕದ ಶೆಡ್‍ನಲ್ಲಿ ಆರೋಪಿ ಕೂಡ ವಾಸ್ತವ್ಯ ಇದ್ದನು. ಈತ ಬಾಲಕಿಯೊಂದಿಗೆ ಪ್ರೀತಿಸುವುದಾಗಿ ನಂಬಿಸಿ ಆಕೆಯ ಪಾಲಕರು ಮನೆಯಲ್ಲಿ ಇಲ್ಲದ ವೇಳೆ 2019ರ ಏ.12ರಿಂದ ಹಲವು ಬಾರಿ ಅತ್ಯಾಚಾರವೆಸಗಿದ್ದನು. ಅಲ್ಲದೇ ಕೃತ್ಯದ ಫೋಟೋಗಳನ್ನು ತನ್ನ ಮೊಬೈಲ್‍ನಲ್ಲಿ ಚಿತ್ರೀಕರಿಸಿದ್ದನು. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಫೋಟೋ ವೈರಲ್ ಮಾಡುವುದಾಗಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಶಾಲೆಯಲ್ಲಿ ಬಾಲಕಿ ಅನಾರೋಗ್ಯಕ್ಕೀಡಾಗಿದ್ದ ವೇಳೆ ತಪಾಸಣೆ ನಡೆಸಿದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದು ಬಂದಿತ್ತು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ