Breaking News

ನಾನು 2028ಕ್ಕೆ ಸಿಎಂ ಸ್ಥಾನಕ್ಕಾಗಿ ಕ್ಲೈಮ್​ ಮಾಡುತ್ತೇನೆ: ಸತೀಶ್ ಜಾರಕಿಹೊಳಿ

Spread the love

ಬೆಂಗಳೂರು: ಈಗ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ನಾನು 2028ಕ್ಕೆ ಸಿಎಂ ಸ್ಥಾನಕ್ಕಾಗಿ ಕ್ಲೈಮ್​ ಮಾಡುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ವಿಕಾಸಸೌಧದಲ್ಲಿ ಇಂದು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇರೆಯವರು ಕೇಳುವುದು, ಬಿಡುವುದು ಅವರವರ ಇಷ್ಟಕ್ಕೆ ಬಿಟ್ಟದ್ದು. ನಾವು 28ಕ್ಕೆ ಕ್ಲೈಂ ಮಾಡ್ತೇವೆ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಅಂತ ಹೇಳಿದ್ದಾರೆ, ಬೇರೆಯವರು ಹೇಳುವ ಅಗತ್ಯವಿಲ್ಲ ಎಂದರು. ಈ ವಿಚಾರದಲ್ಲಿ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಪಕ್ಷದ ತೀರ್ಮಾನವೇ ನನ್ನ ತೀರ್ಮಾನ. ಈಗ ಅಂತಹ ಪರಿಸ್ಥಿತಿ ಉದ್ಭವಿಸಿಲ್ಲ ಎಂದರು.

ರಾಜನಹಳ್ಳಿ ವಾಲ್ಮೀಕಿ ಗುರುಪೀಠ ಸ್ವಾಮೀಜಿ ಹೇಳಿಕೆ: ಸಚಿವ ಸತೀಶ್​ ಜಾರಕಿಹೊಳಿ ಅವರಿಗೆ ನಾಡಿನ ದೊರೆಯಾಗುವ ಶಕ್ತಿ ಇದೆ. ಬರುವ ದಿನಗಳಲ್ಲಿ ಅವರಿಗೆ ಬೆಂಬಲವಾಗಿ ನಿಲ್ಲುತ್ತೇವೆ. ರಾಜ್ಯ ರಾಜಕೀಯದಲ್ಲಿ ಏನಾದರೂ ಬೆಳವಣಿಗೆಗಳು ನಡೆದರೆ ದಲಿತರೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗಲಿ ಎಂಬ ಸಂದೇಶ ಕಳುಹಿಸೋಣ” ಎಂಬ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಅವರು ಸಮುದಾಯದ ಪರವಾಗಿ ಹೇಳಿದ್ದಾರೆ. ಈಗ ಸಿಎಂ ಸ್ಥಾನ ಖಾಲಿ ಇಲ್ಲವಲ್ಲ? ಎಂದರು.

ಸಿಎಂ ವಿರುದ್ದ ಪ್ರಧಾನಿ ವಾಗ್ದಾಳಿ: ಮುಖ್ಯಮಂತ್ರಿ ಸಿದ್ದರಾಮುಯ್ಯ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಮೋದಿಯವರು ರಾಜಕೀಯ ಭಾಷಣ ಮಾಡ್ತಾರೆ. ನಮ್ಮಲ್ಲಿ ವಾಕ್ ಸ್ವಾತಂತ್ರ್ಯವಿದೆ. ಅವರ ಪಕ್ಷದಲ್ಲಿ ಅಂತಹ ಸ್ವಾತಂತ್ರ್ಯವಿಲ್ಲ ಎಂದು ತಿರುಗೇಟು ನೀಡಿದರು.

ಹೊಸ ಕಾಮಗಾರಿಗೆ ಪ್ರಸ್ತಾವನೆ: ಲೋಕೋಪಯೋಗಿ ಇಲಾಖೆಯಲ್ಲಿ ಹೊಸ ರಸ್ತೆ ಕಾಮಗಾರಿಗಳನ್ನು ತೆಗೆದುಕೊಳ್ಳಲು ಪ್ರಸ್ತಾವನೆ ಕಳುಹಿಸುತ್ತಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಹೊಸ ಕಾಮಗಾರಿ ತೆಗೆದುಕೊಳ್ಳಲು 4 ಸಾವಿರ ಕೋಟಿ ರೂ.ವರೆಗೆ ಪ್ರಸ್ತಾವನೆ ಕಳುಹಿಸುತ್ತಿದ್ದೇವೆ. ಅದು ಬಂದರೆ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳುತ್ತೇವೆ. ನಾವು ಬಾಕಿ ಯಾವುದನ್ನೂ ಇಟ್ಟಿಲ್ಲ. ಎಲ್ಲವೂ ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಟ್ಟಿರೋದು. 4 ಸಾವಿರ ಕೋಟಿ ರೂ. ಅಡಿಷನಲ್ ಬಾಕಿ ಇದೆ. 2 ಸಾವಿರ ಕೋಟಿ ರೂ. ಸೇರಿ 6 ಸಾವಿರ ಕೋಟಿ ರೂ. ಇದೆ ಎಂದು ಸಚಿವ ಸತೀಶ್​ ಜಾರಕಿಹೊಳಿ ಹೇಳಿದರು.


Spread the love

About Laxminews 24x7

Check Also

ಮುನಿರತ್ನಗೆ ಜಾಮೀನು ನೀಡದಿರಲು ಮನವಿ

Spread the love ಮಂಡ್ಯ: ‘ಶಾಸಕ ಮುನಿರತ್ನ ಅವರು ದಲಿತ ನಿಂದನೆ ಮಾಡಿರುವುದು ಸಾಕ್ಷಿ ಸಮೇತ ಸಿಕ್ಕಿರುವುದರಿಂದ ಪರಿಶಿಷ್ಟ ಜಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ