Breaking News

ಬ್ರಹ್ಮಾವರದ ಅಂಬೇಡ್ಕರ್ ಭವನದಲ್ಲಿ ಎಣ್ಣೆ ಪಾರ್ಟಿ

Spread the love

ಉಡುಪಿ, ನ.7: ಡಿಎಸ್​ಎಸ್ ಮುಖಂಡ ಶ್ಯಾಮ ರಾಜ್ ಭಿರ್ತಿ ಸೇರಿದಂತೆ ಮತ್ತಿತರರು ಯಾವುದೇ ಅನುಮತಿ ಪಡೆಯದೆ ಅಂಬೇಡ್ಕರ್ ಭವನದಲ್ಲಿ (Ambedkar Bhavan) ಮದ್ಯ ಸೇವಿಸಿ ಪಾರ್ಟಿ ಮಾಡಿದ ಘಟನೆ ಜಿಲ್ಲೆಯ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ತೆಂಕಭಿರ್ತಿಯಲ್ಲಿ ನಡೆದಿದೆ.

 

ಡಿಎಸ್ ಎಸ್ ಮುಖಂಡ ಶ್ಯಾಮ ರಾಜ್ ಭಿರ್ತಿ ಅವರ ಮಗ ಕ್ರೀಡಾಕೂಟಕ್ಕೆ ಆಯ್ಕೆಯಾದ ಸಂಭ್ರಮಕ್ಕೆ ಸಾವಿತ್ರಿಬಾಯಿ ಫುಲೆ ಅವರ ಹೆಸರಿನ ಗ್ರಂಥಾಲಯವನ್ನು ಒಳಗೊಂಡಿರುವ ಅಂಬೇಡ್ಕರ್ ಭವನದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದ ಬಳಿಕ ಯಾವುದೇ ಪೂರ್ವಾನುಮತಿ ಇಲ್ಲದೆ ಜಿಲ್ಲಾ ಸಂಚಾಲಕ, ಡಿಎಸ್​ಎಸ್ ಮುಖಂಡರು ಮತ್ತು ಸ್ಥಳೀಯರು ಎಣ್ಣೆ ಪಾರ್ಟಿ ಮಾಡಿದ್ದಾರೆ.

ಅಂಬೇಡ್ಕರ್ ಭವನದಲ್ಲಿ ಮದ್ಯ ಸೇವನೆ ಮಾಡುತ್ತಿರುವ ವಿಚಾರ ತಿಳಿದ ಸವಿತಾ ಎಂಬವರು ಭವನಕ್ಕೆ ತೆರಳಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಈ ವೇಳೆ ಬೆದರಿಕೆ ಹಾಕಿದ ಆರೋಪದಡಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ