Breaking News

ವಿನಯ್ ಕುಲಕರ್ಣಿಯ c.b.i.ವಿಚಾರಣೆ ಎರಡನೇ ದಿನವೂ ಮುಂದುವರಿದಿದೆ.

Spread the love

ಹುಬ್ಬಳ್ಳಿ: ಜಿಪಂ ಸದಸ್ಯ ಯೊಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯ ವಿಚಾರಣೆ ಎರಡನೇ ದಿನವೂ ಮುಂದುವರಿದಿದೆ.

ಹುಬ್ಬಳ್ಳಿಯ ಸಿಎಆರ್ ಮೈದಾನದ ಕಚೇರಿಯಲ್ಲಿ ನಡೆಯುತ್ತಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ವಿಚಾರಣೆ ಇಂದು ಎರಡನೇಯ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಹ ಅವರ ಮಾವ ಚಂದ್ರಶೇಖರ್ ಇಂಡಿ ಹಾಗೂ ಮಾಜಿ ಆಪ್ತ ಕಾರ್ಯದರ್ಶಿ ಸೋಮಲಿಂಗ ನ್ಯಾಮೇಗೌಡ ವಿಚಾರಣೆ ಸಹ ಮುಂದುವರಿದಿದೆ.

ನ್ಯಾಯಾಂಗ ಬಂಧನದಲ್ಲಿದ್ದ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ತನ್ನ ವಶಕ್ಕೆ ಪಡೆದಿದೆ. ಈಗಾಗಲೇ ತಾವು ಸಂಗ್ರಹಿಸಿರುವ ಸಾಕ್ಷ್ಯಗಳ ಬಗ್ಗೆಯೂ ಹೇಳಿಕೆಯನ್ನ ಪಡೆಯುತ್ತಿದ್ದು, ವಿಚಾರಣೆಗೆ ಒಳಪಟ್ಟಿರುವ ನೂರಾರು ಜನರ ಹೇಳಿಕೆ ಹಾಗೂ ಸಾಕ್ಷ್ಯಗಳ ಬಗ್ಗೆ ವಿನಯ್ ಕುಲಕರ್ಣಿಯವರನ್ನ ವಿಚಾರಣೆ ನಡೆಸುತ್ತಿದ್ದಾರೆ.

ಸಿಆರ್ ಮೈದಾನದಲ್ಲಿ ಎರಡು ಪ್ರತ್ಯೇಕ ಕೊಠಡಿಗಳನ್ನ ಪಡೆದಿರುವ ಸಿಬಿಐ ತಂಡ, ಪೂರಕವಾದ ವ್ಯಕ್ತಿಗಳನ್ನ ಕರೆಯಿಸಿ ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆ ಮಾಜಿ ಮಂತ್ರಿ ವಿನಯ್ ಕುಲಕರ್ಣಿ ಆಪ್ತ ಸಹಾಯಕರಾಗಿದ್ದ ಕೆಎಎಸ್ ಅಧಿಕಾರಿ ಸೋಮಲಿಂಗ ನ್ಯಾಮೇಗೌರನ್ನ ಸಹ ತ್ರೀವ ವಿಚಾರಣೆ ನಡೆಸಿತ್ತು. ಇಂದು ಬೆಳಗ್ಗೆ 9 ಗಂಟೆಯಿಂದ ಮತ್ತೆ ವಿಚಾರಣೆ ಆರಂಭಿಸಿರುವ ಸಿಬಿಐ, ಪ್ರಕರಣದಲ್ಲಿರುವ ಹಲವರನ್ನು ವಿಚಾರಣೆ ನಡೆಸಲಿದೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ