ಬೆಂಗಳೂರು: ಮಾರ್ಚ್‌ನಲ್ಲಿ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆ-1ಕ್ಕೆ ನೋಂದಣಿ ಮಾಡಿಕೊಳ್ಳುವ ಅವಧಿ ಯನ್ನು ನ.15ರ ವರೆಗೆ ವಿಸ್ತರಣೆ ಮಾಡಲಾಗಿದ್ದು ಈ ಅವಕಾಶವನ್ನು ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳಬಹುದಾಗಿದೆ.
2023-24ನೇ ಸಾಲಿನಿಂದ ಜಾರಿಗೆ ಬರುವಂತೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 3 ಪರೀಕ್ಷೆಗಳನ್ನು ನಡೆಸಲಾಗುತ್ತದೆ.
ಇದರಲ್ಲಿ ಪರೀಕ್ಷೆ-1 ಕ್ಕೆ ಅರ್ಹ ವಿದ್ಯಾರ್ಥಿಗಳು ನೋಂದಣಿ ಮಾಹಿತಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೆಬ್‌ಸೈಟ್ ನಲ್ಲಿ ಶಾಲಾ ಲಾಗಿನ್ ಮೂಲಕ ಪಡೆಯಲು ತಿಳಿಸಲಾಗಿದೆ. ಈ ಹಿಂದೆ ಆನ್ ಲೈನ್ ಮೂಲಕ ನೋಂದಾಯಿಸಿಕೊಳ್ಳಲು ನ.4 ಕೊನೆಯ ದಿನವಾಗಿತ್ತು. ಶಾಲೆಗಳು ಶಾಲಾ ಸಂಕೇತ ಪಡೆಯುವ ಸಮಯಾವಕಾಶ ವನ್ನು ನ.27ರ ವರೆಗೆ ವಿಸ್ತರಿಸಲಾಗಿದ್ದು , ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.