ಬೆಳಗಾವಿ: ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪ್ರಸಕ್ತ ಸಾಲಿನ ಪುರುಷರ ಕಬಡ್ಡಿ ತಂಡದ ಯೂನಿವರ್ಸಿಟಿ ಬ್ಲೂ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿಲ್ಲ.
ತಮಗೆ ಬೇಕಾದ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕ್ರೀಡಾಪಟುವೊಬ್ಬರು ಆರೋಪಿಸಿದ್ದಾರೆ. ಕಬಡ್ಡಿ ಆಯ್ಕೆ ಪ್ರಕ್ರಿಯೆಯನ್ನು ಕಳೆದ ನ.1 ಮತ್ತು 2 ರಂದು ವಿಜಯಪುರದಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ತಮಗೆ ಅನ್ಯಾಯವಾಗಿದೆ ಎಂದು ನೊಂದ ಕ್ರೀಡಾಪಟು ಕಾಂತು ಕೂಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
, ”ನಾನು ಚೆನ್ನಾಗಿಯೇ ಆಡಿರುವೆ. ನನ್ನ ಆಟವನ್ನು ಪರಿಗಣಿಸದಯೇ ಅರ್ಹತೆ ಇಲ್ಲದವರನ್ನು ಆಯ್ಕೆ ಮಾಡಿದ್ದಾರೆ. ಕಾರಣ ನೀಡದೇ ನನ್ನನ್ನು ಕೈಬಿಟ್ಟಿದ್ದಾರೆ. ಅಲ್ಲದೆ, ತಮಗೆ ಬೇಕಾದವರನ್ನು ಆಯ್ಕೆ ಮಾಡಿಕೊಂಡು ನನ್ನಂಥ ಅನೇಕ ಬಡ ಪ್ರತಿಭಾನ್ವಿತ ಆಟಗಾರರಿಗೆ ಅನ್ಯಾಯ ಎಸಗಿದ್ದಾರೆ. ಈ ಪ್ರಕ್ರಿಯೆ ರದ್ದುಪಡಿಸಿ, ಬೇರೆ ಆಯ್ಕೆ ಸಮಿತಿ ರಚನೆ ಮಾಡಿ ಮುಂದಿನ ಕಬಡ್ಡಿ ತಂಡದ ಆಯ್ಕೆ ಪ್ರಕ್ರಿಯೆಯನ್ನು ಚಿತ್ರೀಕರಣ ಸಹಿತವಾವಿ ಮತ್ತು ಪಾರದರ್ಶಕವಾಗಿ ನಡೆಸುವಂತೆ ಒತ್ತಾಯಿಸಿದರು.