ಕೊಪ್ಪಳ: ಚಾಲಕನ ನಿಯಂತ್ರಣ ತಪ್ಪಿ ತುಂಗಭದ್ರಾ ನದಿ ಸೇತುವೆ ಮೇಲಿಂದ ಲಾರಿ ಉರುಳಿ ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ.
ಕೊಪ್ಪಳದಿಂದ ಹೊಸಪೇಟೆ ಕಡೆ ಹೊರಟಿದ್ದ ಲಾರಿ ಅತಿಯಾದ ವೇಗದಿಂದಾಗಿ ಈ ಘಟನೆ ಜರುಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಚಾಲಕ ಜಾರ್ಕಂಡ್ ರಾಜ್ಯದ ಭರತ ಸಿಂಗ್ (42) ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಮುನಿರಾಬಾದ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.