Breaking News

ಹುಬ್ಬಳ್ಳಿ: ಗುಡಗೇರಿ ಠಾಣೆಯ ಎಎಸ್​ಐ ಆತ್ಮಹತ್ಯೆ

Spread the love

ಹುಬ್ಬಳ್ಳಿ: ಎಎಸ್‌ಐ ಒಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಗೋಳ ತಾಲ್ಲೂಕಿನ ಗುಡಿಗೇರಿಯಲ್ಲಿ ನಡೆದಿದೆ.

ಗುಡಗೇರಿ ಪೊಲೀಸ್ ಠಾಣೆಯ ಎಎಸ್​ಐ ಬಸವರಾಜ ಶಾಂತವೀರಪ್ಪ ಪಾಯಣ್ಣವರ (54) ಆತ್ಮಹತ್ಯೆ ಮಾಡಿಕೊಂಡ ಎಎಸ್‌ಐ ಆಗಿದ್ದಾರೆ.

ರಾತ್ರಿ ಪಾಳಿ ಕೆಲಸ ಮುಗಿಸಿ ವಸತಿ ಗೃಹಕ್ಕೆ ಹೋಗಿದ್ದ ಬಸವರಾಜ, ವಸತಿ ಗೃಹದ ಆವರಣದಲ್ಲಿ ದೇಗುಲದ ಬಳಿ ಮಲಗಿದ್ದರು. ಕುಟುಂಬಸ್ಥರು ಊಟಕ್ಕೆ ಎಬ್ಬಿಸಲು ಹೋದಾಗ ಅವರು ಎದ್ದಿಲ್ಲ. ತಕ್ಷಣ ಕುಟುಂಬಸ್ಥರು ಅವರನ್ನು ಲಕ್ಷೇಶ್ವರ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಷ್ಟೊತ್ತಿಗಾಗಲೇ ಬಸವರಾಜ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಎಎಸ್‌ಐ ಬಸವರಾಜ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗಗೊಂಡಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಎಎಸ್​ಐ ಕೆಲವು ದಿನಗಳಿಂದ ಕಾಲುನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅನಾರೋಗ್ಯವೇ ಆತ್ಮಹತ್ಯೆಗೆ ಕಾರಣವಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೃತ ಬಸವರಾಜ ಅವರು ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಶಾಂತಗಿರಿ ಗ್ರಾಮದವರು. ಪತ್ನಿ ಮತ್ತು ಮೂವರು ಮಕ್ಕಳು ಇದ್ದಾರೆ. ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ