Breaking News

ಕಾಂತರಾಜು ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಲ್ಲ: ಸಚಿವ‌ ತಂಗಡಗಿ

Spread the love

ಬೆಂಗಳೂರು:ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್‌ ಕಾಂತರಾಜು ನೇತೃತ್ವದ ಸಮೀಕ್ಷಾ ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯವಾಗುವುದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

 

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನು ಕಾಂತರಾಜು ವರದಿಯನ್ನು ಜಾತಿ ಗಣತಿ ಎಂದು ಕರೆಯಲಾಗುತ್ತಿದೆ. ಮೂಲವಾಗಿ ಇದು ಜಾತಿಗಣತಿ ಸಮೀಕ್ಷೆ ಅಲ್ಲವೇ, ಅಲ್ಲ.‌ ಇದು ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಸರಿಪಡಿಸುವ ಹಿನ್ನೆಲೆಯಲ್ಲಿ ವರದಿ ಸಿದ್ಧಪಡಿಸಲಾಗಿದೆ. ಅದನ್ನು ಹೊರತುಪಡಿಸಿ ಜಾತಿ ವರದಿ ಎಂದು ಕರೆಯುವುದು ಸರಿಯಲ್ಲ ಎಂದು ತಿಳಿಸಿದರು.‌

ಕಾಂತರಾಜು ವರದಿಯಿಂದ ಪ್ರತಿಯೊಂದು ಸಮಾಜದ ಜನಸಂಖ್ಯೆ, ಶಿಕ್ಷಣ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಮಾಜದ ಅಂಕಿ- ಅಂಶ ಸ್ಪಷ್ಟವಾಗಿ ತಿಳಿಯಲಿದೆ. ಕಾಂತರಾಜು ಸಮೀಕ್ಷಾ ವರದಿಯನ್ನು ಕೆಲ ಸಮುದಾಯದವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವರದಿ‌ ಸರ್ಕಾರಕ್ಕೆ ಸಲ್ಲಿಕೆಯೇ ಆಗಿಲ್ಲ. ವರದಿ ಸ್ವೀಕಾರ ಮಾಡಿದರೆ ಅದನ್ನು ಪಡೆದು ಮೊದಲು ಅಧ್ಯಯನ ಮಾಡುತ್ತೇವೆ. ವರದಿಯನ್ನು ವಿರೋಧ ಮಾಡುತ್ತಿದ್ದವರೂ ವರದಿ ನೋಡಿದ್ದರೆ ನಮಗೆ ತಿಳಿಸಲಿ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರಲ್ಲೂ ಕೂಡ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.

ಕಾಂತರಾಜು ವರದಿ ಜಾತಿ ಜನಗಣತಿ ಅಲ್ಲ: ಕಾಂತರಾಜು ವರದಿಯಲ್ಲಿ ಪ್ರತಿಯೊಂದು ಸಮುದಾಯದ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಸಮೀಕ್ಷೆ ಮಾಡಲಾಗಿದೆ. ವರದಿ ನೋಡದೇ ಅದನ್ನು ವಿರೋಧ ಮಾಡುವುದು ಸರಿಯಲ್ಲ. ಕಾಂತರಾಜು ವರದಿ ಜಾತಿ ಜನಗಣತಿ ಅಲ್ಲ. ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಿರುವುದು. ಪ್ರತಿಯೊಂದು ಸಮುದಾಯದ ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿ ತಿಳಿಯುವ ಸಲುವಾಗಿ ಸಮೀಕ್ಷೆ ನಡೆಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲೇ ವರದಿ ಸಿದ್ಧವಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ವರದಿ ಸ್ವೀಕಾರವಾಗಿಲ್ಲ. ವರದಿ ಸಲ್ಲಿಕೆಯಾಗದೇ ವರದಿ ಬಗ್ಗೆ ಅಪಸ್ವರ ತೆಗೆಯುವುದು ಸರಿಯಲ್ಲ. ಯಾವದೇ ರಾಜಕೀಯ ಹಿತಾಸಕ್ತಿ ಕೂಡ ಇದರಲ್ಲಿ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ