ಗ್ಯಾಸ್ ಒಲೆ ಮೇಲೆ 20 ಲೀಟರ್ ಕುಕ್ಕರ್‌ನಲ್ಲಿ 3 ಸೇರು ತೊಗರಿಬೇಳೆ ಬೇಯಿಸುತ್ತಿದ್ದಾಗ ವಿಜಿಲ್ ಬಾರದೇ ಏಕಾಏಕಿ ಸ್ಫೋಟಗೊಂಡಿದೆ. ಅದರಿಂದ ಕೊಠಡಿಯ ಚಾವಣಿ, ಅಕ್ಕಪಕ್ಕದ ಗೋಡೆಗೆ ತೊಗರಿಬೇಳೆ ಸಿಡಿದಿರುವುದು ಕಂಡು ಬಂದಿದೆ. ಸದ್ಯ ಬಿಸಿಯೂಟ ತಯಾರಿಸುವ ಪಾತ್ರೆ, ಇತರ ಸಾಮಾನುಗಳು ತುಂಬಾ ಹಳೆದಾಗಿವೆ. ಸುಸ್ಥಿತಿಯಲ್ಲಿ ಇಲ್ಲದ ಕಾರಣ ಒಂದಿಲ್ಲೊಂದು ಸಮಸ್ಯೆ ಎದುರಿಸುವಂತಾಗಿದೆ.
600 ವಿದ್ಯಾರ್ಥಿಗಳು ಇಲ್ಲಿ ಅಭ್ಯಾಸ ಮಾಡುತ್ತಿದ್ದು, ಶಿಕ್ಷಕರು ಪಾಠದ ಕಡೆ ಗಮನಹರಿಸಲು ಆಗದೇ ಬಿಸಿಯೂಟದ ಕಡೆಗೆ ಹೆಚ್ಚಿನ ಲಕ್ಷ್ಯ ಕೊಡಬೇಕಾದ ಸ್ಥಿತಿ ಇದೆ. ಶಿಕ್ಷಕರು ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಇಸ್ಕಾನ್ ಬಿಸಿಯೂಟ ಸೌಲಭ್ಯ ಒದಗಿಸಬೇಕೆಂಬ ಒತ್ತಾಯವಿದೆ