Breaking News

ಲೋಕಾಯುಕ್ತರಿಗೆ ದೂರು ನೀಡಬೇಕೇ? ಜಸ್ಟ್ ಇಷ್ಟು ಮಾಡಿ ಸಾಕು

Spread the love

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ, ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ.

 

 

ವಿಜಯಪುರ: ಲೋಕಾಯುಕ್ತ ಪೊಲೀಸ್‌ ಅಧಿಕಾರಿಗಳಿಂದ (Karnataka Lokayukta) ನವೆಂಬರ್ 9 ರಂದು ವಿಜಯಪುರ ಜಿಲ್ಲೆಯ (Vijayapura News) ದೇವರ ಹಿಪ್ಪರಗಿ ತಾಲೂಕಾ ಕೇಂದ್ರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

ವಿಜಯಪುರ ಜಿಲ್ಲೆಯ ವ್ಯಾಪ್ತಿಯ ಸಾರ್ವಜನಿಕರು ತಮ್ಮ‌ಸಮಸ್ಯೆಯನ್ನ‌ ಲಿಖಿತವಾಗಿ ಅಧಿಕಾತಿಗಳಿಗೆ ನೀಡಿ ಚರ್ಚಿಸಬಹುದಾಗಿದೆ.

 

ಸಾರ್ವಜನಿಕರಿಂದ ಅರ್ಜಿ ಸ್ವೀಕಾರ
ಅಂದು ಅಪರಾಹ್ನ 3 ಗಂಟೆಯಿಂದ ಪೋಲಿಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ಇನ್ಸಪೆಕ್ಟರ್-1, ಪೊಲೀಸ್ ಇನ್ಸ್‌ಪೆಕ್ಟರ್ -2, ದೇವರ ಹಿಪ್ಪರಗಿಯ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿಯಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡಿವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಿ ಪರಿಹಾರ ಸೂಚಿಸಲಿದ್ದಾರೆ.

 

ಏನೆಲ್ಲ ಸಮಸ್ಯೆಗಳಿಗೆ ಅರ್ಜಿ ಕೊಡಬಹುದು?
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ, ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ.

 


Spread the love

About Laxminews 24x7

Check Also

ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷ ರವಿಕುಮಾರ್‌ ಕೊನೆಗೂ ರಾಜೀನಾಮೆ

Spread the loveಬೆಂಗಳೂರು, (ಸೆಪ್ಟೆಂಬರ್ 05): ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (Bhovi Development Corporation) ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ