Breaking News

ಪಿಎಸ್​ಐ ನೇಮಕಾತಿ ಹಗರಣ: ಇಂದು ಹೈಕೋರ್ಟ್​ ತೀರ್ಪು,

Spread the love

ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ಕುರಿತ ತೀರ್ಪನ್ನು ಹೈಕೋರ್ಟ್ ಇಂದು ಪ್ರಕಟಿಸಲಿದೆ.

 

ಸರ್ಕಾರದ ಆದೇಶ ರದ್ದು ಕೋರಿ ಎನ್.ವಿ.ಚಂದನ್ ಸೇರಿದಂತೆ ಪಿಎಸ್​​ಐ ಆಯ್ಕೆ ಪಟ್ಟಿಯಲ್ಲಿ ಹೆಸರಿದ್ದ 100 ಅಧಿಕ ಅಭ್ಯರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿಗಳ ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಲಾಗಿದೆ. ನ್ಯಾಯಮೂರ್ತಿಗಳಾದ ಪಿ.ಎಸ್.ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ, ಶುಕ್ರವಾರ ಮಧ್ಯಾಹ್ನ ತೀರ್ಪು ಹೊರಹಾಕಲಿದೆ.

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸುವುದಾಗಿ 2022ರ ಏ.29ರಂದು ಅಂದಿನ ಬಿಜೆಪಿ ಸರ್ಕಾರ ಆದೇಶಿಸಿತ್ತು. ಇದಕ್ಕೆ ಪಿಎಸ್​ಐ ಆಗಿ ಆಯ್ಕೆಯಾಗಿದ್ದ ಅಭ್ಯರ್ಥಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡುವಂತೆ ಒತ್ತಾಯಿಸಿದ್ದರು. ಬಳಿಕ ಸರ್ಕಾರದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು 2022ರ ಜು.19ರಂದು ಕೆಎಟಿ ವಜಾಗೊಳಿಸಿತ್ತು. ಇದರಿಂದ ಅಭ್ಯರ್ಥಿಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪಿಎಸ್​ಐ ನೇಮಕಾತಿಗೆ ಹೊಸದಾಗಿ ಲಿಖಿತ ಪರಿಕ್ಷೆ ನಡೆಸುವ ಸರ್ಕಾರದ ಆದೇಶಕ್ಕೆ 2022ರ ಸೆ.27ರಂದು ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಬಳಿಕ ಆ ತಡೆಯಾಜ್ಞೆ ವಿಸ್ತರಣೆಯಾಗುತ್ತಾ ಬಂದಿದೆ. ವಿಭಾಗೀಯ ಪೀಠವು ಅರ್ಜಿಗಳ ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.

ಇಂದು ಹೈಕೋರ್ಟ್ ನೀಡುವ ಮಹತ್ವದ ತೀರ್ಪಿಗಾಗಿ ಪಿಎಸ್​ಐ ಆಕಾಂಕ್ಷಿತರು, ಅಭ್ಯರ್ಥಿಗಳು ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಈ ತೀರ್ಪಿನ ಮೇಲೆ ಆಯ್ಕೆಯಾದ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.


Spread the love

About Laxminews 24x7

Check Also

ಹಿಂದು ಮುಸ್ಲಿಂ ಎಂದು ಬಡೆದಾಡಿಕೊಳ್ಳುವ ಇಂದಿನ ದಿನಗಳಲ್ಲಿ ಗ್ರಾಮಸ್ಥರಿಂದ ಭಾವೈಕ್ಯತೆಯಿಂದ ಮೊಹರಂ ಆಚರಣೆ

Spread the love ಗ್ರಾಮಸ್ಥರಿಂದ ಭಾವೈಕ್ಯತೆಯಿಂದ ಮೊಹರಂ ಆಚರಣೆ ಹಿಂದು ಮುಸ್ಲಿಂ ಎಂದು ಬಡೆದಾಡಿಕೊಳ್ಳುವ ಇಂದಿನ ದಿನಗಳಲ್ಲಿ ಜಾಗೃತ ಫಾತಿಮಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ