ಕಲಬುರಗಿ: ಕೆಇಎ ನಡೆಸಿರೋ ಎಫ್‌ಡಿಎ ಪರೀಕ್ಷೆಯಲ್ಲಿ ಅಕ್ರಮ ಎಸೆಗಿರುವ ಆರೋಪ ಎದುರಿಸುತ್ತಿರುವ ಪ್ರಕರಣದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ನ್ನು ಕೊನೆಗೂ ಬಂಧನ ಮಾಡಲಾಗಿದೆ.
ಮಹಾರಾಷ್ಟ್ರ ಗಡಿಯಲ್ಲಿ ಕಲಬುರಗಿ ಜಿಲ್ಲೆಯ ವಿಶೇಷ ಪೊಲೀಸ್ ತಂಡದಿಂದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ನನ್ನು ಅರೆಸ್ಟ್ ಮಾಡಲಾಗಿದೆ. ಆರ್‌ಡಿಪಿಯನ್ನು ಬಂಧಿಸಿದ್ದು, ಕಲಬುರಗಿಗೆ ಕರೆತರುವ ಸಾಧ್ಯತೆ ಇದೆ.
ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ಕೆಇಎ ಪರೀಕ್ಷಾ ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್, ನವೆಂಬರ್ 6 ರಂದು ಕಲಬುರಗಿ ನಗರದ ವರ್ಧಾ ಲೇಔಟ್‌ನ ಮಹಾಲಕ್ಷ್ಮಿ ಅಪಾರ್ಟ್ಮೆಂಟ್ ಹಿಂಭಾಗದ ಕಾಂಪೌಂಡ್ ಹಾರಿ ಎಸ್ಕೆಪ್ ಆಗಿದ್ದ. ಈ ಕಿಂಗ್‌ಪಿನ್ ಬಂಧನಕ್ಕಾಗಿಯೇ ನಾಲ್ವರು ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಬಂಧನದ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
Laxmi News 24×7