Breaking News

ಕರ್ನಾಟಕ ಬಿಜೆಪಿಯ ನೂತನ ಸಾರಥಿ ವಿಜಯೇಂದ್ರ

Spread the love

ನವದೆಹಲಿ: ಬಹು ದಿನಗಳಿಂದ ಚರ್ಚೆಯಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯು ಕೊನೆಗೂ ಆಗಿದೆ. ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ.ವೈ.

ವಿಜಯೇಂದ್ರ ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಈ ನೇಮಕ ತಕ್ಷಣಕ್ಕೆ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ದಕ್ಷಿಣ ಕನ್ನಡ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್​ ಇದುವರೆಗೆ ರಾಜ್ಯಾಧ್ಯಕ್ಷರಾಗಿದ್ದರು. ಅವರ ಅಧಿಕಾರಾವಧಿ ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಪೂರ್ಣಗೊಂಡಿತ್ತು.

 

 

ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಸಾಕಷ್ಟು ಚರ್ಚೆಗಳು ಶುರುವಾಗಿದ್ದವು. ಇದರ ನಡುವೆ ಹಲವು ನಾಯಕರ ಹೆಸರುಗಳು ಮುಂಚೂಣಿಗೆ ಬಂದಿದ್ದವು. ಇದೇ ವೇಳೆ, ಅಧಿಕೃತ ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ವಿಷಯ ಕೂಡ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಹೀಗಾಗಿ ರಾಜ್ಯದ ಉನ್ನತ ಹುದ್ದೆಗಳಿಗೆ ಯಾರನ್ನು ನೇಮಕ ಮಾಡಲಾಗುತ್ತದೆ ಎಂಬ ಪ್ರಶ್ನೆಗಳು ಎದ್ದಿದ್ದವು.


Spread the love

About Laxminews 24x7

Check Also

ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ…

Spread the love ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ… ಪರಿಸರ ಜಾಗೃತಿಯ ಸಂದೇಶ ಖಾನಾಪೂರ ತಾಲೂಕಿನ ಗರ್ಲಗುಂಜಿ ಗ್ರಾಮದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ