Breaking News
Home / ರಾಜಕೀಯ / ಮುಂದಿನ ಶುಕ್ರವಾರ ಶಾಸಕಾಂಗ ಸಭೆ ಕರೆದು ಪ್ರತಿಪಕ್ಷ ನಾಯಕರ ಆಯ್ಕೆ

ಮುಂದಿನ ಶುಕ್ರವಾರ ಶಾಸಕಾಂಗ ಸಭೆ ಕರೆದು ಪ್ರತಿಪಕ್ಷ ನಾಯಕರ ಆಯ್ಕೆ

Spread the love

ಬೆಂಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕಗೊಂಡಿದ್ದಾರೆ.

ಈ ವೇಳೆ, ಮಾಧ್ಯಮದೊಂದಿಗೆ ಸಂತಸ ಹಂಚಿಕೊಂಡ ಅವರು, ರಾಜ್ಯಾಧ್ಯಕ್ಷ ಹುದ್ದೆ ಅಲಂಕರಿಸಿದ ದಿನವೇ, ಪ್ರತಿಪಕ್ಷ ನಾಯಕರ ಆಯ್ಕೆಯ ದಿನಾಂಕದ ಬಗ್ಗೆ ಘೋಷಿಸಿದ್ದಾರೆ. ಮುಂದಿನ ಶುಕ್ರವಾರ ಶಾಸಕಾಂಗ ಸಭೆ ಕರೆದು ಅಭಿಪ್ರಾಯ ಪಡೆದು ಪ್ರತಿಪಕ್ಷ ನಾಯಕರನ್ನು ಆಯ್ಕೆ ಮಾಡಲಾಗುತ್ತದೆ. ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡುವುದಕ್ಕಾಗಿ ಕೇಂದ್ರದಿಂದ ವೀಕ್ಷಕರು ಆಗಮಿಸಲಿದ್ದು, ಅವರ ನೇತೃತ್ವದಲ್ಲೇ ಎಲ್ಲ ಶಾಸಕರ ಅಭಿಪ್ರಾಯ ಪಡೆದು, ಅವರ ಎದುರಲ್ಲೇ ಹೆಸರು ಘೋಷಣೆ ಆಗಲಿದೆ ಎಂದು ತಿಳಿಸಿದ್ದಾರೆ.

ನೂತನ ರಾಜ್ಯಾಧ್ಯಕ್ಷರ ಹೆಸರು ಪ್ರಕಟಗೊಳ್ಳುತ್ತಿದ್ದಂತೆ ಯಡಿಯೂರಪ್ಪ ನಿವಾಸ ಧವಳಗಿರಿಗೆ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಯಡಿಯೂರಪ್ಪ ಅವರಿಂದ ಆಶೀರ್ವಾದ ಪಡೆದುಕೊಂಡು ಪರಸ್ಪರ ಸಿಹಿ ಹಂಚಿಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಅಮಿತ್ ಶಾ, ಬಿ.ಎಲ್.ಸಂತೋಷ್ ಎಲ್ಲರೂ ಚರ್ಚಿಸಿ ಬಿಜೆಪಿ ರಾಜ್ಯಾಧ್ಯಕ್ಷನಾಗಿ ತಮ್ಮನ್ನು ಆಯ್ಕೆ ಮಾಡಿದ್ದಕ್ಕಾಗಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

“ರಾಜ್ಯದಲ್ಲಿ ಯಡಿಯೂರಪ್ಪ ಆದಿಯಾಗಿ ಅನೇಕ ಹಿರಿಯರ ಶ್ರಮ ಇದೆ. ಲಕ್ಷಾಂತರ ಕಾರ್ಯಕರ್ತರ ಪರಿಶ್ರಮದಿಂದ ಬಿಜೆಪಿ ಇಷ್ಟು ಎತ್ತರಕ್ಕೆ ಬೆಳೆದು ನಿಂತಿದೆ. ಕೇಂದ್ರದ ವರಿಷ್ಠರು ನನ್ನ ಮೇಲೆ ಇಟ್ಟಿರುವ ಭರವಸೆ ವಿಶ್ವಾಸ, ಪಕ್ಷದ ನಾಯಕರ ವಿಶ್ವಾಸ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಗಟ್ಟಿಗೊಳಿಸುವ ಕೆಲಸ ಮಾಡುತ್ತೇನೆ. ನಮ್ಮ ಮುಂದಿನ ಗುರಿ ಮುಂದಿನ ಲೋಕಸಭಾ ಚುನಾವಣೆ. ಇಡಿ ಜಗತ್ತು ಭಾರತದ ಕಡೆ ನೋಡುತ್ತಿದೆ. ಮೋದಿ ನಾಯಕತ್ವದ ಮೇಲೆ ಭರವಸೆ ಇಟ್ಟಿದೆ. ಇಂತಹ ಸಂದರ್ಭದಲ್ಲಿ ಪಕ್ಷ ಸಂಘಟನೆ ಮೂಲಕ ಮುಂದಿನ ಚುನಾವಣೆಯಲ್ಲಿ ರಾಜ್ಯದಿಂದ ಅತಿ ಹೆಚ್ಚು ಸಂಸದರನ್ನು ಗೆಲ್ಲಿಸುವುದರ ಮೂಲಕ ಮೋದಿ ಕೈ ಬಲಪಡಿಸುವಲ್ಲಿ ನಾವು ಯಶಸ್ವಿಯಾಗುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ