ಬೆಂಗಳೂರು : ರಾಜ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನಡುವೆ ವೈದ್ಯಸೇವೆ ಬಿಟ್ಟು ಡಿ ದರ್ಜೆ ನೌಕರನಂತೆ ಕೆಲಸ ನಿರ್ವಹಣೆ ಮಾಡುತ್ತಿರುವ ಬೌರಿಂಗ್ ಸಂಸ್ಥೆಯ ಡಾ.
ಹೆಚ್. ಎಂ ಶ್ರೀಕಾಂತ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರಿಗೆ ದೂರು ಸಲ್ಲಿಕೆ ಮಾಡಲಾಗಿದೆ.
ನಗರದಲ್ಲಿಂದು ಜನತಾ ಪಕ್ಷದ ಕರ್ನಾಟಕ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಎನ್. ನಾಗೇಶ್ ಅವರು ದೂರು ಸಲ್ಲಿಕೆ ಮಾಡಿದ್ದು, ರಾಜಧಾನಿ ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ(ಬೌರಿಂಗ್) ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಆಗಿ ಸೇವೆ ಸಲ್ಲಿಸದೆ ಡಿ ದರ್ಜೆ ನೌಕರರಂತೆ ಕಡತ ನಿರ್ವಹಣೆಯ ಕೆಲಸದಲ್ಲಿ ತೊಡಗಿರುವ ಡಾ. ಹೆಚ್ ಎಂ ಶ್ರೀಕಾಂತ್ ವಿರುದ್ಧ ಕಾನೂನು ಕ್ರಮ ಕೈಗೊಂಡು, ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.