Breaking News

ಬಿಜಗುಪ್ಪಿ ಗ್ರಾಮದಲ್ಲಿ ಜಗಜ್ಯೋತಿ‌ ಬಸವೇಶ್ವರರ ಮೂರ್ತಿ ಭಗ್ನವಾಗಿದೆ.

Spread the love

ರಾಮದುರ್ಗ–  ಬಿಜಗುಪ್ಪಿ ಗ್ರಾಮದಲ್ಲಿ ಜಗಜ್ಯೋತಿ‌ ಬಸವೇಶ್ವರರ ಮೂರ್ತಿ ಮೂರ್ತಿ ಭಗ್ನವಾಗಿದೆ.
      ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ಘಟನೆ ನಡೆದಿದ್ದು, ಬಸವಣ್ಣನವರ ಮೂರ್ತಿಯ ಕೈಯನ್ನು ಕಿಡಿಗೇಡಿಗಳು ಮುರಿದಿದ್ದಾರೆ.
 ಸುದ್ದಿ ತಿಳಿದ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
 ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ ಪರಿಶೀಲಿಸಿದರು. ಒಂದು ವಾರದ ಒಳಗಾಗಿ ಆರೋಪಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಒಂದು ತಿಂಗಳೊಳಗಾಗಿ ಭಗ್ನಗೊಂಡ ಮೂರ್ತಿ ಬದಲಾಯಿಸಿ ಹೊಸ ಮೂರ್ತಿ ಪ್ರತಿಷ್ಠಾಪನೆ ಮಾಡುವುದಾಗಿ‌ ಶಾಸಕ ಮಹಾದೇವಪ್ಪ ಯಾದವಾಡ ಭರವಸೆ ನೀಡಿದರು.
  ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.

Spread the love

About Laxminews 24x7

Check Also

ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.

Spread the love ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ