Breaking News

ಪೇಪರ್ ಮಿಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪೇಪರ್ ಭಸ್ಮ

Spread the love

ಮೈಸೂರು : ಪೇಪರ್ ಮಿಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪೇಪರ್ ಭಸ್ಮವಾಗಿರುವ ಘಟನೆ ಜಿಲ್ಲೆಯ ನಂಜನಗೂಡಿನ ಬಳಿ ನಡೆದಿದೆ.

ಇಲ್ಲಿನ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿರುವ ಸೌತ್ ಇಂಡಿಯಾ ಪೇಪರ್ ಮಿಲ್​ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸುದ್ದಿ ತಿಳಿದಾಕ್ಷಣ ಅಗ್ನಿಶಾಮಕ ದಳದವರು ತಕ್ಷಣ ಘಡನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ನಂಜನಗೂಡು ಬಳಿಯ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ಇರುವ ಸೌತ್ ಇಂಡಿಯಾ ಪೇಪರ್ ಮಿಲ್ ಕಾರ್ಖಾನೆಯ ಬಳಿ ಪೇಪರ್ ಮಿಲ್ ಕಾರ್ಖಾನೆಯ ಗೋಡಾನ್​ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಗೊಡೌನ್​ನಲ್ಲಿ ಇದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪೇಪರ್ ಸುಟ್ಟು ಭಸ್ಮವಾಗಿದೆ.

ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದು, ಸುಮಾರು 4 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ ಎಂದು ಅಗ್ನಿಶಾಮಕ ಅಧಿಕಾರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಕಾರ್ಖಾನೆಯ ಬಳಿ ಇರುವ ಪೇಪರ್ ಗೊಡೌನ್​ನಲ್ಲಿ ಶನಿವಾರ ಬೆಳಗಿನಜಾವ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಸಿಕೊಂಡಿದೆ ಎಂದು ಶಂಕಿಸಲಾಗಿದೆ ಎಂದು ಹೇಳಿದರು. ಈ ಘಟನೆ ಕುರಿತು ನಂಜನಗೂಡು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಧೈರ್ಯ ವಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕಾಂಗ್ರೆಸ್ ಮುಖಂಡ ರವಿ ಕರಾಳೆ ಹೇಳಿದರು.

Spread the loveಧೈರ್ಯ ವಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕಾಂಗ್ರೆಸ್ ಮುಖಂಡ ರವಿ ಕರಾಳೆ ಹೇಳಿದರು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ