Breaking News

ಬೆಂಗಳೂರಲ್ಲಿ ಇಸ್ಟೀಟ್ ಜೂಜು ಅಡ್ಡೆ ಮೇಲೆ ದಾಳಿ; 150ಕ್ಕೂ ಹೆಚ್ಚು ಜೂಜುಕೋರರು ಪೊಲೀಸ್ ವಶಕ್ಕೆ

Spread the love

ಬೆಂಗಳೂರು: ಅಕ್ರಮವಾಗಿ ನಡೆಯುತ್ತಿದ್ದ ಇಸ್ಟೀಟ್ ಅಡ್ಡೆ ಮೇಲೆ ಏಕಾಏಕಿ ದಾಳಿ ನಡೆಸಿದ ನಗರ ಪಶ್ಚಿಮ ವಿಭಾಗದ‌ ಪೊಲೀಸರು 150ಕ್ಕೂ ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

 

ಬಸವೇಶ್ವರ ನಗರದಲ್ಲಿರುವ ಅಡಿಗ ರಮ್ಮಿ‌ ಕ್ಲಬ್​ನಲ್ಲಿ ಅಕ್ರಮ ಚಟುವಟಿಕೆ ಕುರಿತು ಖಚಿತ ಮಾಹಿತಿ ಮೇರೆಗೆ ಬಸವೇಶ್ವರ ನಗರ ಹಾಗೂ ಗೋವಿಂದರಾಜ ನಗರ ಪೊಲೀಸರು ದಾಳಿ ನಡೆಸಿದ್ದಾರೆ‌.‌ ಕ್ಲಬ್​ನಲ್ಲಿ‌ 150ಕ್ಕೂ ಹೆಚ್ಚು ಮಂದಿ ಇಸ್ಟೀಟ್ ದಂಧೆಯಲ್ಲಿ ತೊಡಗಿಸಿಕೊಂಡಿದ್ದರು. ಎಲ್ಲರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ. ದಾಳಿ ಲಕ್ಷಾಂತರ ರೂಪಾಯಿ ಹಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಅಶೋಕ್ ಅಡಿಗ ಎಂಬುವರಿಗೆ ಸೇರಿದ ಕ್ಲಬ್ ಇದಾಗಿದೆ.


Spread the love

About Laxminews 24x7

Check Also

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Spread the loveಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ  ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ