ಹಾವೇರಿ: ಮಹಿಳೆಯನ್ನು ಬೈಕ್‍ನಲ್ಲಿ ಕರೆ ತಂದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿ, ಕಾಡಿನಲ್ಲಿ ಎಸೆದು ಹೋಗಿರುವ ಅಮಾನವೀಯ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯ ಹಾನಗಲ್ ತಾಲೂಕಿನ ಮಕರವಳ್ಳಿ ಅರಣ್ಯ ಪ್ರದೇಶದಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದ 48 ವರ್ಷದ ಈರಮ್ಮಳನ್ನು ಅದೇ ಗ್ರಾಮದ 26 ವರ್ಷದ ಯಲ್ಲಪ್ಪ ಕೊಲೆ ಮಾಡಿದ್ದಾನೆ.
ಮಹಿಳೆಯನ್ನ ಹತ್ಯೆ ಮಾಡಿ ಮೃತದೇಹವನ್ನ ಅರಣ್ಯ ಪ್ರದೇಶದಲ್ಲಿ ಎಸೆದು ಯುವಕ ಪರಾರಿಯಾಗಿದ್ದ. ಕೊಳೆತ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Laxmi News 24×7