ಚಿತ್ರದುರ್ಗ : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಸಚಿವ ಡಿ. ಸುಧಾಕರ್ ‘ಹೊಸ ಬಾಟಲಿಯಲ್ಲಿ ಹಳೆ ವೈನ್’ ಎಂದು ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಆಂತರಿಕ ವಿಚಾರದಲ್ಲಿ ನಾವು ಮೂಗು ತೋರಿಸುವುದಿಲ್ಲ.
ಕಾಂಗ್ರೆಸ್‌ನ ಸಿದ್ಧಾಂತವೇ ಬೇರೆ ಬಿಜೆಪಿಯ ಸಿದ್ಧಾಂತವೇ ಬೇರೆ. ಬಿಜೆಪಿ ಸಮಾಜ ಒಡೆಯುವ ನೀತಿ ಹೊಂದಿದೆ. ಯಾರೇ ಬಂದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಎಂದರು.