Breaking News

ಯಾರೋ ಒಬ್ಬನಿಂದ ಪಕ್ಷ ಬೆಳೆಯಲ್ಲ: ಕೆ.ಎಸ್‌.ಈಶ್ವರಪ್ಪ

Spread the love

ಶಿವಮೊಗ್ಗ: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕವಾಗಿರುವ ಬಗ್ಗೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಯಾರೋ ಒಬ್ಬ ವ್ಯಕ್ತಿಯಿಂದ ಪಕ್ಷ ಬೆಳೆಯಲ್ಲ. ಭಾರತೀಯ ಜನತಾ ಪಾರ್ಟಿ ಯಾರ ಮೇಲೂ ನಿಂತಿಲ್ಲ ಎಂದಿದ್ದಾರೆ.

 

ಪ್ರಧಾನಿ ನರೇಂದ್ರ ಮೋದಿ ಅವರೂ ಬಿಜೆಪಿಯಲ್ಲಿ ಒಬ್ಬ ಕಾರ್ಯಕರ್ತರು. ನಾನು ಕೂಡ ಕಾರ್ಯಕರ್ತ. ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ 28 ಸ್ಥಾನ ಗೆಲ್ಲುತ್ತೇವೆ. ಸಾಮೂಹಿಕ ನೇತೃತ್ವದಲ್ಲಿ ಈ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿದೆ ಎನ್ನುವುದೇ ಗೊತ್ತಿಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಕಾಂಗ್ರೆಸ್ ಪಕ್ಷ ಎಷ್ಟಿದೆ? ಕರ್ನಾಟಕದಲ್ಲಿ ಕಾಂಗ್ರೆಸ್ ಒಡೆದು ಚೂರಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕುಟುಂಬ ರಾಜಕಾರಣದ ಬಗ್ಗೆ ಟ್ವೀಟ್ ಮಾಡಲು ಕಾಂಗ್ರೆಸ್‌ಗೆ ಅಧಿಕಾರ ಇದೆಯೇ? ನೆಹರೂ, ಇಂದಿರಾಗಾಂಧಿ, ಎಎಸಿಸಿ ಅಧ್ಯಕ್ಷರು ಕುಟುಂಬದವರು. ಎಲ್ಲೂ ವಿರೋಧವಿಲ್ಲ, ಬಿಜೆಪಿಯಲ್ಲಿ ಎಲ್ಲ ಒಟ್ಟಾಗಿದ್ದೇವೆ. ವಿಜಯೇಂದ್ರ ಅವರಿಂದ ಸಂಘಟನೆ ಬೆಳೆಯುತ್ತದೆ, ಅವರಿಗೆ ಅಭಿನಂದನೆಗಳು ಎಂದು ಈಶ್ವರಪ್ಪ ಹೇಳಿದ್ದಾರೆ.


Spread the love

About Laxminews 24x7

Check Also

ನೇತೃತ್ವವನ್ನು ಧಾರವಾಡದಲ್ಲಿ ಬೀದಿಗೆ ಇಳಿದ ವಿದ್ಯಾರ್ಥಿಗಳು… ರಾಜ್ಯ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹ.

Spread the love ನೇತೃತ್ವವನ್ನು ಧಾರವಾಡದಲ್ಲಿ ಬೀದಿಗೆ ಇಳಿದ ವಿದ್ಯಾರ್ಥಿಗಳು… ರಾಜ್ಯ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ