Breaking News

ಸರ್ಕಾರದಲ್ಲಿ ಹಣ ಇಲ್ಲ, ದಿವಾಳಿಯಾಗಿರುವುದು ಸ್ಪಷ್ಟ:B.S.Y.

Spread the love

ಬೆಂಗಳೂರು: ರಾಜ್ಯದಲ್ಲಿ ಬರಗಾಲ (Drought) ಆವರಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ (BJP) ಮುಖಂಡರು ಬರ ಅಧ್ಯಯನ ನಡೆಸುತ್ತಿದ್ದಾರೆ. ಬರ ಅಧ್ಯಯನದ ನಂತರ ಸರ್ಕಾರಕ್ಕೂ ಒಂದು ವಾಸ್ತವದ ಚಿತ್ರಣ ನೀಡುತ್ತೇವೆ. ರಾಜ್ಯದಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿದೆ.

ಸರ್ಕಾರದಲ್ಲಿ ಹಣ ಇಲ್ಲ, ದಿವಾಳಿಯಾಗಿರುವುದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ (Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಿಎಸ್ ವೈ, ರಾಜ್ಯದಲ್ಲಿ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಸರ್ಕಾರ ದಿವಾಳಿಯಾಗಿದೆ. ಎಲ್ಲ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿದೆ. ಸರ್ಕಾರದಲ್ಲಿ ಹಣ ಇಲ್ಲ, ದಿವಾಳಿಯಾಗಿರುವುದು ಸ್ಪಷ್ಟವಾಗಿದೆ. ರಸ್ತೆಗಳು ಡಾಂಬರೀಕರಣಗೊಂಡಿಲ್ಲ. ಬೀದಿ ದೀಪಗಳಿಲ್ಲದೆ ರಾತ್ರಿ ವೇಳೆ ರಸ್ತೆ ಕಾಣುತ್ತಿಲ್ಲ. ಕ್ಷೇತ್ರದ ಅಭಿವೃದ್ದಿಗೆ ಅನುದಾನ ನೀಡುವ ವಿಚಾರದಲ್ಲಿ ಕಾಂಗ್ರೆಸ್ (Congress) ತಾರತಮ್ಯ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಅಲ್ಲದೆ, ಚಿಕ್ಕಬಾಣಾವರ ಕೆರೆಯಲ್ಲಿ (Chikkabanavara lake) ತ್ಯಾಜ್ಯ ತುಂಬಿದೆ. ಕೆರೆ ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಕೆಲಸ ಆಗಬೇಕಿದೆ. ಈ ಪರಿಸ್ಥಿತಿ ಸರಿ ಮಾಡಲು ಏನು ಕೆಲಸ ಮಾಡಿದ್ದೀರಿ? ನಮ್ಮ ಶಾಸಕರ ಜೊತೆ ಮಾತನಾಡಿದ್ದೀರಾ? ನಮ್ಮ ಸರ್ಕಾರ ಇದ್ದಾಗ ಹೇಗೆ ಅಭಿವೃದ್ದಿಯಾಗಿದೆ ಅನ್ನೋದನ್ನ ಜನ ಹೇಳುತ್ತಾರೆ. ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.


Spread the love

About Laxminews 24x7

Check Also

ಖಾಸಗಿ ಲಾಡ್ಜ್​​ನಲ್ಲಿ ಪಿಎಸ್​ಐ ಆತ್ಮಹತ್ಯೆ

Spread the love ತುಮಕೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪೊಲೀಸ್​​ ಸಬ್ ಇನ್ಸ್​ಪೆಕ್ಟರ್​​ವೊಬ್ಬರು ನಗರದ ಖಾಸಗಿ ಲಾಡ್ಜ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ