ಬೆಳಗಾವಿ: ನಾನು ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ. ಉಪಮುಖ್ಯಮಂತ್ರಿ (DCM) ಡಿ.ಕೆ. ಶಿವಕುಮಾರ್ (D.K. Shivakumar) ಅವರೊಂದಿಗೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ (Sathish jarakiholi) ಹೇಳಿದರು.
ಬೆಳಗಾವಿ (belagavi) ರಾಜಕಾರಣದಲ್ಲಿ ಬೇರೆಯವರ ಹಸ್ತಕ್ಷೇಪದ ಕುರಿತು ಮುನಿಸಿಕೊಂಡಿರುವ ಜಾರಕಿಹೊಳಿ ಬೆಳಗಾವಿಯಲ್ಲಿ ಮಾತನಾಡಿ, ಈ ಬಗ್ಗೆ ಪಕ್ಷದ ವತಿಯಿಂದ ಚರ್ಚೆ ನಡೆಯಬೇಕು.
ನಾವು ಏನೂ ಮಾಡಲು ಸಾಧ್ಯವಿಲ್ಲ ಎಂದರು.
ಡಿ.ಕೆ. ಶಿವಕುಮಾರ್ ಅವರು ಹಲವು ಬಾರಿ ನಮ್ಮ ಮನೆಗೆ ಬಂದಿದ್ದಾರೆ. ಇಲ್ಲಿ ಪಕ್ಷದ ಮತ್ತು ಅಭಿವೃದ್ಧಿ ವಿಚಾರದ ಕುರಿತು ಚರ್ಚೆ ಆಗಿದೆ. ನಾನು ಶಾಸಕರೊಂದಿಗೆ ಮೈಸೂರು ಪ್ರವಾಸಕ್ಕೆ ಹೊರಟಿದ್ದ ಹಾಗೂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಉದ್ದೇಶವೇ ಬೇರೆ. ಹೊಂದಾಣಿಕೆ ಎನ್ನುವುದು ಸಾಧ್ಯವೇ ಇಲ್ಲ. ಲೋಕಸಭೆ ಚುನಾವಣೆಯ ಬಳಿಕ ಯಾವ ಹೊಸ ವಿಚಾರ ಬರುತ್ತದೆ ಎಂದು ಕಾದು ನೋಡಬೇಕು ಎಂದು ತಿಳಿಸಿದರು.