Breaking News

ಭಾರತ vs ನೆದರ್ಲೆಂಡ್ಸ್‌ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸರಕು ಸಾಗಣೆ ವಾಹನಗಳಿಗೆ ನಿಷೇಧ

Spread the love

ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್‌ನ ಭಾರತ ಹಾಗೂ ನೆದರ್ಲೆಂಡ್ಸ್​ ನಡುವಿನ ಪಂದ್ಯಕ್ಕೆ ನಾಳೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಮೈದಾನದ ಸುತ್ತಮುತ್ತ ಸರಕು ಹಾಗೂ ಸಾಗಣಿಕೆ ವಾಹನಗಳಿಗೆ ನಿಷೇಧ ವಿಧಿಸಲಾಗಿದೆ.

ವಿಶ್ವಕಪ್‌ನಲ್ಲಿ ಲೀಗ್ ಹಂತದ ಮತ್ತು ಭಾರತ ತಂಡದ ಕೊನೆಯ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಯಾವುದೇ ರೀತಿಯ ಸಂಚಾರ ದಟ್ಟಣೆ ಆಗದಂತೆ ಕ್ರಮವಹಿಸಲಾಗಿದೆ. ಕ್ಯಾಬ್​ಗಳಿಗೆ ಪಿಕ್ ಅಪ್ ಅಂಡ್ ಡ್ರಾಪ್ ಸ್ಥಳಗಳನ್ನ ಗುರುತಿಸಲಾಗಿದೆ. ವಾರಾಂತ್ಯ ಆಗಿರುವುದರಿಂದ ನಾಳೆ ಸಾರ್ವಜನಿಕರು ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ಪ್ರಯಾಣಿಸುವುದನ್ನು ಸಾಧ್ಯವಾದಷ್ಡು ಕಡಿಮೆ ಮಾಡಿದರೆ ಉತ್ತಮ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತ್ ತಿಳಿಸಿದ್ದಾರೆ.

ಟೂರ್ನಿಯಲ್ಲಿ ಒಂದೂ ಸೋಲು ಕಾಣದೇ ಟೇಬಲ್​ ಟಾಪ್​ನಲ್ಲಿರುವ ಟೀಮ್​ ಇಂಡಿಯಾಕ್ಕೆ ತಳ ಮಟ್ಟದಲ್ಲಿರುವ ಕ್ರಿಕೆಟ್​ ಶಿಶು ನೆದರ್ಲೆಂಡ್ಸ್​ ಸಾವಾಲು ಒಡ್ಡುತ್ತಿದೆ. ಡಚ್​ ತಂಡ ಅಂಕಪಟ್ಟಿಯಲ್ಲಿ ಕೆಳಗೆ ಇರಬಹುದು. ಹಾಗೆಂದ ಮಾತ್ರಕ್ಕೆ ಕೇವಲವಾಗಿ ನೋಡಲು ಸಾಧ್ಯವಿಲ್ಲ. ಏಕೆಂದರೆ ಟೂರ್ನಿಯಲ್ಲಿ ಬಲಿಷ್ಟ ಬ್ಯಾಟಿಂಗ್​​ ಬಲವನ್ನು ಹೊಂದಿರುವ ದಕ್ಷಿಣ ಆಫ್ರಿಕಾವನ್ನೇ ನೆದರ್ಲೆಂಡ್ಸ್​ ಮಣಿಸಿತ್ತು.

ವಿರಾಟ್​, ಸಿರಾಜ್​ ಕ್ರೇಜ್​: ವಿರಾಟ್​ ಕೊಹ್ಲಿ ಮತ್ತು ಮೊಹಮ್ಮದ್​ ಸಿರಾಜ್​ ರಾಯಲ್​ ಚಾಲೆಂಜರ್ಸ್​​ ಬೆಂಗಳೂರು (ಆರ್​ಸಿಬಿ) ತಂಡಕ್ಕಾಗಿ ಆಡುತ್ತಿದ್ದಾರೆ. ಹೀಗಾಗಿ ಹೋಮ್​ ಗ್ರೌಂಡ್​ ಅನುಭವ ಈ ಇಬ್ಬರು ಆಟಗಾರರಿಗೆ ಇರಲಿದೆ. ಆರ್​ಸಿಬಿ ತಂಡದ ಅಭಿಮಾನಿಗಳು ನಾಳಿನ ಪಂದ್ಯಕ್ಕೆ ಕಿಕ್ಕಿರಿದು ಸೇರಲಿದ್ದಾರೆ. ಕನ್ನಡಿಗರಾದ ಕೆ ಎಲ್​ ರಾಹುಲ್​ ಮತ್ತು ಪ್ರಸಿದ್ಧ್​ ಕೃಷ್ಣ ತಂಡದ ಭಾಗವಾಗಿದ್ದಾರೆ.

ತಂಡಗಳು ಇಂತಿವೆ: ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಪ್ರಸಿದ್ಧ್ ಕೃಷ್ಣ, ಸೂರ್ಯಕುಮಾರ್ ಯಾದವ್.

ನೆದರ್ಲೆಂಡ್ಸ್​: ಸ್ಕಾಟ್ ಎಡ್ವರ್ಡ್ಸ್ (ನಾಯಕ), ಮ್ಯಾಕ್ಸ್ ಒ’ಡೌಡ್, ಬಾಸ್ ಡಿ ಲೀಡ್, ವಿಕ್ರಮ್ ಸಿಂಗ್, ತೇಜ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಅಕರ್ಮನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ನೋಹ್ ಕ್ರೋಸ್, ವೆಸ್ಲಿ ಬ್ಯಾರೆಸಿ, ಸಾಕಿಬ್ ಜುಲ್ಫಿಕ್ , ಶರೀಜ್ ಅಹ್ಮದ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ