Breaking News

ಯುವತಿಯರ ಡೀಪ್​ ಫೇಕ್ ಫೋಟೋ ಪ್ರಕರಣ: ಎಸ್​ಪಿ ಪ್ರತಿಕ್ರಿಯೆ

Spread the love

ಬೆಳಗಾವಿ: ದೇಶಾದ್ಯಂತ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್​ ಫೇಕ್ ವಿಡಿಯೋ ಸದ್ದು ಮಾಡುತ್ತಿರುವಾಗಲೇ ಬೆಳಗಾವಿ ಜಿಲ್ಲೆಯಲ್ಲಿ ಡೀಪ್ ಫೇಕ್ ಫೋಟೋ ಎಡಿಟ್ ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಹಾಗೂ ಆಕೆಯ ಇಬ್ಬರು ಸ್ನೇಹಿತೆಯರ ನಗ್ನ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ ಖಾನಾಪುರದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಯುವಕನ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಳು. ಇದರಿಂದಾಗಿ ನಿನ್ನ ಮತ್ತು ಸ್ನೇಹಿತೆಯರ ಮಾನ ಹರಾಜು ಹಾಕುತ್ತೇನೆ ಎಂದು ಯುವಕ ಬೆದರಿಕೆ ಹಾಕಿದ್ದನಂತೆ. ಬಳಿಕ ಸಾಮಾಜಿಕ ಜಾಲತಾಣದಲ್ಲಿ ಯುವತಿಯ ಹೆಸರಿನಲ್ಲಿ ನಕಲಿ ಖಾತೆ ತೆರೆದು, ಡೀಪ್​ ಫೇಕ್ ಫೋಟೋ ಎಡಿಟ್ ಮಾಡಿ ತಾನು ಪ್ರೀತಿಸುತ್ತಿದ್ದ ಹುಡುಗಿ ಹಾಗೂ ಮತ್ತಿಬ್ಬರು ಹುಡುಗಿಯರ ನಗ್ನ ಫೋಟೋವನ್ನು ಅಪ್ ಲೋಡ್ ಮಾಡಿದ್ದ. ಆರೋಪಿ ಬೆಂಗಳೂರಿನಲ್ಲಿ ಐಟಿ ಉದ್ಯೋಗ ಮಾಡಿಕೊಂಡಿದ್ದಾನೆ. ಈ ಸಂಬಂಧ ಯುವತಿ ಪೊಲೀಸರಿಗೆ ದೂರು ನೀಡಿದ್ದು, ತಕ್ಷಣವೇ ಎಚ್ಚೆತ್ತ ಖಾನಾಪುರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಎಸ್ಪಿ ಪ್ರತಿಕ್ರಿಯೆ : ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್​, ಸಂತ್ರಸ್ತ ಯುವತಿಯ ಸಾಮಾಜಿಕ ಜಾಲತಾಣ ಖಾತೆಯಿಂದ ಆರೋಪಿ ಫೋಟೋ ತೆಗೆದುಕೊಂಡು ಈ ರೀತಿ ಡೀಫ್ ಫೇಕ್ ಫೋಟೋ ತಂತ್ರಜ್ಞಾನದಿಂದ ನಗ್ನ ಫೋಟೋ ಎಡಿಟ್ ಮಾಡಿದ್ದ. ಬಳಿಕ ಈ ನಗ್ನ ಫೋಟೋವನ್ನು ಸಂತ್ರಸ್ತ ಯುವತಿಯ ಹೆಸರಿನಲ್ಲಿ ನಕಲಿ ಖಾತೆ ತೆರೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ. ಈ ಬಗ್ಗೆ ಯುವತಿ ಪೊಲೀಸ್​ ಠಾಣೆಗೆ ದೂರು ನೀಡಿದ್ದರಿಂದ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಲಾಗಿದೆ. ಸೈಬರ್ ಕ್ರೈಮ್​​ನಲ್ಲಿ ಮುಂದಿನ ತನಿಖೆ ನಡೆಯಲಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ