Breaking News

ಆಟಗಾರರು ಸಾಂಪ್ರದಾಯಿಕ ಉಡುಗೆ ತೊಟ್ಟು ದೀಪಾವಳಿ ಹಬ್ಬವನ್ನು ಆದ್ಧೂರಿಯಾಗಿ ಆಚರಿಸಿದರು.

Spread the love

ಬೆಂಗಳೂರು: ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಜೊತೆಗೆ ವಿಶ್ವಕಪ್​ನ ಲೀಗ್ ಹಂತದ ಕೊನೆ ಪಂದ್ಯಾಟಕ್ಕೆ ಬೆಂಗಳೂರಿಗೆ ಬಂದಿಳಿದಿರುವ ಭಾರತ ತಂಡದ ಆಟಗಾರರು ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು.

ಇಂದು ಭಾರತ ಮತ್ತು ನೆದರ್ಲೆಂಡ್ಸ್​ ನಡುವಿನ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ಭಾರತವು ಲೀಗ್ ಹಂತದ 8 ಪಂದ್ಯಗಳಲ್ಲಿ ಗೆದ್ದು ಬೀಗಿದ್ದು, ಸೆಮಿಫೈನಲ್​ ಸೆಣಸಾಟಕ್ಕೆ ಸಜ್ಜಾಗಿದೆ. ಭಾರತವು ಇಂದು ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನೆದರ್ಲೆಂಡ್ಸ್​ ತಂಡವನ್ನು ಎದುರಿಸಲಿದೆ.

ಇದಕ್ಕೂ ಮುನ್ನ ಬೆಂಗಳೂರಿನ ಖಾಸಗಿ ಹೋಟೆಲ್​ವೊಂದರಲ್ಲಿ ಟೀಮ್​ ಇಂಡಿಯಾ ಆಟಗಾರರು ಸಂಭ್ರಮದಿಂದ ದೀಪಾವಳಿಯನ್ನು ಆಚರಿಸಿದರು. ಈ ವೇಳೆ ಕುಟುಂಬಸ್ಥರು, ಭಾರತ ತಂಡದ ಸದಸ್ಯರು ದೀಪಾವಳಿ ಆಚರಣೆಯಲ್ಲಿ ಪಾಲ್ಗೊಂಡಿದ್ದರು. ದೀಪಾವಳಿ ಆಚರಣೆಯ ಫೋಟೋವನ್ನು ನಾಯಕ ರೋಹಿತ್ ಶರ್ಮಾ ಮತ್ತು ಉಪನಾಯಕ ಕೆ ಎಲ್​ ರಾಹುಲ್​ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಭಾರತ ತಂಡದ ಆಟಗಾರರು ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ್ದಾರೆ.


Spread the love

About Laxminews 24x7

Check Also

ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ

Spread the love ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ ಬಿಎಸ್ಎಫ್ ಯೋಧ ದಗಡು ಪೂಜಾರಿ ರಜೆಯ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ