(ಬೆಂಗಳೂರು): ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಚೈತ್ರಾ ಮೇಲೆ ಆಫ್ರಿಕನ್ ಮಹಿಳಾ ಕೈದಿಗಳಿಂದ ಹಲ್ಲೆಯಾಗಿದೆ ಎಂದು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಷ್ಟ್ರಗೀತೆ ವಿಚಾರಕ್ಕೆ ನಡೆದ ಜಗಳದಲ್ಲಿ ಚೈತ್ರಾ ಮೇಲೆ ಆಫ್ರಿಕನ್ ಮಹಿಳಾ ಕೈದಿಗಳಿಂದ ಹಲ್ಲೆ ನಡೆದಿದೆ.
ಇಂದು ಮಧ್ಯಾಹ್ನ ಮಹಿಳಾ ವಿಚಾರಣಾಧೀನ ಕೈದಿಗಳ ಬ್ಯಾರಕ್‌ನಲ್ಲಿ ರಾಷ್ಟ್ರಗೀತೆ ವಿಚಾರಕ್ಕೆ ಆಫ್ರಿಕನ್ ಮಹಿಳಾ ಕೈದಿಗಳು ಮತ್ತು ಚೈತ್ರಾ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಆಫ್ರಿಕನ್ ಮಹಿಳಾ ಕೈದಿಗಳು ಚೈತ್ರಾ ಮತ್ತು ಮೂವರು ಸ್ಥಳೀಯ ಕೈದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪರಪ್ಪನ ಅಗ್ರಹಾರ ಪೊಲೀಸರಿಗೆ ಚೈತ್ರಾ ದೂರು ನೀಡಿದ್ದಾರೆ. ಹಲ್ಲೆ ಬಳಿಕ ಕುಟುಂಬಸ್ಥರಿಗೆ, ಸ್ನೇಹಿತರಿಗೆ ಕರೆ ಮಾಡಿ ಚೈತ್ರಾ ನೋವು ತೋಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಘಟನೆಯ ಸಂಪೂರ್ಣ ವಿವರ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಪರಪ್ಪನ ಅಗ್ರಹಾರ ಪೊಲೀಸರು ತನಿಖೆಯಲ್ಲಿ ತೊಡಗಿದ್ದಾರೆ.