Breaking News

ಸಚಿವರಿಗೆ ಹಣ ಸಂಗ್ರಹದ ಟಾರ್ಗೆಟ್ ನೀಡಲಾಗಿದೆ:H.D.K.

Spread the love

ಸಚಿವರಿಗೆ ಹಣ ಸಂಗ್ರಹದ ಟಾರ್ಗೆಟ್ ನೀಡಲಾಗಿದೆ

ಬೆಂಗಳೂರು: “ಕರ್ನಾಟಕದಲ್ಲಿ ಕಾಂಗ್ರೆಸ್ ತಂದಿರುವ ಪಂಚ ಗ್ಯಾರಂಟಿಗಳನ್ನು ತೆಲಂಗಾಣ ಸೇರಿದಂತೆ ಪಂಚರಾಜ್ಯಗಳ ಜನತೆ ನಂಬಬಾರದು.

ಈ ಗ್ಯಾರಂಟಿಗಳಿಗೆ ಯಾವ ಕಾರಣಕ್ಕೂ ಮರುಳಾಗಬೇಡಿ, ಕಾಂಗ್ರೆಸ್ ಮೋಸ ಮಾಡುತ್ತಿದೆ” ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ತೆಲಂಗಾಣದಲ್ಲಿ ನಮ್ಮ ಟೆಂಪರರಿ ಚೀಫ್ ಮಿನಿಸ್ಟರ್, ಡೂಪ್ಲಿಕೇಟ್ ಚೀಫ್ ಮಿನಿಸ್ಟರ್​ಗಳು ಹಾಗೂ ಮಂತ್ರಿಗಳು ಗ್ಯಾರಂಟಿಗಳ ಬಗ್ಗೆ ಮಾತಾಡಿದ್ದಾರೆ. ಈ ಗ್ಯಾರಂಟಿಗಳ ಬೆನ್ನು ತಟ್ಟಿಕೊಳ್ಳೋಕೆ ಹೋಗಿ ಮುಖಭಂಗವನ್ನೂ ಅನುಭವಿಸಿದ್ದಾರೆ. ತೆಲಂಗಾಣಕ್ಕೆ ಹೋಗಿ ಡೂಪ್ಲಿಕೇಟ್ ಚೀಫ್ ಮಿನಿಸ್ಟರ್(ಸಿದ್ದರಾಮಯ್ಯ) ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 2 ಲಕ್ಷ ಉದ್ಯೋಗ ಭರ್ತಿ ಬಗ್ಗೆ ಮಾತಾಡಿದ್ದಾರೆ. ಇನ್ನುಳಿದಂತೆ ಹಲವು ಘೋಷಣೆ ಮಾಡಿದ್ದಾರೆ. 2013ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಆ ಐದು ವರ್ಷಗಳಲ್ಲಿ 2.45 ಲಕ್ಷ ಉದ್ಯೋಗ ನೇಮಕಾತಿಯನ್ನೇ ಮಾಡಿಲ್ಲ. ನಮ್ಮ ರಾಜ್ಯದಲ್ಲಿ ಎರಡೂವರೆ ಲಕ್ಷ ಖಾಲಿ ಸರ್ಕಾರಿ ಹುದ್ದೆಗಳು ಇದ್ದರೂ ತೆಲಂಗಾಣಕ್ಕೆ ಹೋಗಿ ಭಾಷಣ ಮಾಡಿದ್ದಾರೆ. ಇಲ್ಲಿ ಖಾಲಿ ಇಟ್ಟುಕೊಂಡು, ಅಲ್ಲಿ ಹೋಗಿ ಖಾಲಿ ಹುದ್ದೆ ಭರ್ತಿ ಬಗ್ಗೆ ಭಾಷಣ ಮಾಡಿದ್ದಾರೆ” ಎಂದು ಲೇವಡಿ ಮಾಡಿದ್ದಾರೆ.

“ನಮ್ಮ ಡೂಪ್ಲಿಕೇಟ್ ಚೀಫ್ ಮಿನಿಸ್ಟರ್ (ಡಿ ಕೆ ಶಿವಕುಮಾರ್) ಅಲ್ಲಿ ಹೋಗಿ 5 ತಾಸು ತ್ರೀಫೇಸ್ ವಿದ್ಯುತ್ ಕೊಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಅಲ್ಲಿ 24 ಗಂಟೆ ಈಗಾಗಲೇ ಕರೆಂಟ್ ಕೊಡುತ್ತಿದ್ದಾರೆ. ಅಲ್ಲಿ ಹೋಗಿ ನಿರಂತರ ವಿದ್ಯುತ್ ಕೊಡುವ ಕಡೆ 5 ತಾಸು ವಿದ್ಯುತ್ ನ ಭರವಸೆ ನೀಡುವ ಭಾಷಣ ಮಾಡಿ ನಗೆಪಾಟಲಿಗೀಡಾಗಿದ್ದಾರೆ. 200 ಯೂನಿಟ್ ವಿದ್ಯುತ್ ಫ್ರೀ ಎಂದರು ಯಾರಿಗೆ ಎಷ್ಟು ಕೊಡುತ್ತಿದ್ದಾರೆ. ಮಹದೇವಪ್ಪ ನಿನಗೂ ಫ್ರೀ, ಕಾಕಾ ಪಾಟೀಲ ನಿನಗೂ 200 ಯೂನಿಟ್ ಕರೆಂಟ್ ಫ್ರೀ ಅಂದಿದ್ದರು. ಆದರೆ ಈಗ ಮಹದೇವಪ್ಪನಿಗೂ ಕತ್ತಲು, ಕಾಕಾಪಾಟೀಲಗೂ ಕತ್ತಲು, ಇಬ್ಬರೂ ನನಗೂ ಕತ್ತಲು, ನಿನಗೂ ಕತ್ತಲು ಎಂದು ಮಾತಾಡಿಕೊಳ್ಳುವ ಪರಿಸ್ಥಿತಿ ಬಂದಿದೆ” ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.


Spread the love

About Laxminews 24x7

Check Also

ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಸುವರ್ಣಸೌಧ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ

Spread the loveಬೆಳಗಾವಿ: ಕೇಂದ್ರ ಸರ್ಕಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ