Breaking News

ನ.15 ರಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕಾರ: ಬಿ.ವೈ ವಿಜಯೇಂದ್ರ

Spread the love

ತುಮಕೂರು: ಮುಂಬರುವ ಬುಧವಾರ 15 ನೇ ತಾರೀಖಿನಂದು ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಪಕ್ಷದ ಅಧ್ಯಕ್ಷನಾಗಿ ಜವಾಬ್ದಾರಿ ಸ್ವೀಕಾರ ಮಾಡುತ್ತಿದ್ದೇನೆ ಎಂದು ನಿಯೋಜಿತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.

ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ವರಿಷ್ಠರಾದ ಜೆ.ಪಿ ನಡ್ಡಾ, ಅಮಿತ್ ಶಾ, ಸಂತೋಷ್ ಸೇರಿದಂತೆ ಎಲ್ಲರೂ ಚರ್ಚೆ ಮಾಡಿ ರಾಜ್ಯಾಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ.‌ ಅಧಿಕಾರ ವಹಿಸಿಕೊಳ್ಳುವ ಮುನ್ನ ಸಿದ್ಧಗಂಗಾ ಮಠಕ್ಕೆ ಭೇಟಿ ಕೊಟ್ಟು ಆಶೀರ್ವಾದ ಪಡೆಯಲು ಬಂದಿದ್ದೇನೆ. ತಂದೆ ಯಡಿಯೂರಪ್ಪನವರು ಯಾವುದೇ ನಿರ್ಣಯ ತೆಗೆದುಕೊಳ್ಳುವ ಮುನ್ನ ಶಿವಕುಮಾರ ಸ್ಚಾಮೀಜಿ ಆಶೀರ್ವಾದ ಪಡೆದುಕೊಳ್ಳುತ್ತಿದ್ದರು ಎಂದರು.

ನಳಿನ್ ಕುಮಾರ್ ಕಟೀಲ್ ಅವರು ಯಶಸ್ವಿಯಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಕಟ್ಟಿದ್ರು. ನಮ್ಮ ಪಕ್ಷದ ಹಿರಿಯ ಮುಖಂಡರಾದ ಬಿ ಎಸ್​ ಯಡಿಯೂರಪ್ಪ, ಬಸವರಾಜ​ ಬೊಮ್ಮಾಯಿ, ಈಶ್ವರಪ್ಪ, ಸದಾನಂದ ಗೌಡ, ಕಾರಜೋಳ, ಯತ್ನಾಳ್​, ಸೋಮಣ್ಣ ಸೇರಿದಂತೆ ಎಲ್ಲಾ ಹಿರಿಯರ ಸಮ್ಮುಖದಲ್ಲಿ ಅಧಿಕಾರ ಸ್ವೀಕಾರ ಮಾಡುತ್ತಿದ್ದೇನೆ. ರಾಷ್ಟ್ರೀಯ ನಾಯಕರಿಗೆ ಚುನಾವಣೆ ಇರುವುದರಿಂದ ಬರುತ್ತಿಲ್ಲ. ‌ಕೇಂದ್ರದ ವೀಕ್ಷಕರು ಬರಲಿದ್ದಾರೆ. ಶುಕ್ರವಾರದೊಳಗೆ ಬಿಜೆಪಿ ಪಕ್ಷದ ಶಾಸಕಾಂಗ ಸಭೆ ಕರೆಯಲಿದ್ದೇವೆ ಎಂದು ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ