Breaking News

ಹಳೆ ವೈಷಮ್ಯ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್​ನಲ್ಲಿ ನಡೆದಿದೆ.

Spread the love

ಬೆಳಗಾವಿ : ಹಳೇ ವೈಷಮ್ಯ ಹಿನ್ನೆಲೆ ಪೆಟ್ರೋಲ್ ಬಂಕ್​​ನಲ್ಲಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಭಾನುವಾರ ರಾತ್ರಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ.

ಗೋಕಾಕ್​ ಪಟ್ಟಣದ ಆದಿಜಾಂಬವ ನಗರದ ನಿವಾಸಿ ಶಾನೂರು ಪೂಜಾರಿ (27) ಕೊಲೆಯಾದ ಯುವಕ.

ಘಟನೆಯಿಂದ ಕೆರಳಿದ ಮೃತ ಯುವಕನ ಕುಟುಂಬಸ್ಥರು ಅದೇ ಕಾಲೋನಿಯ ಯುವಕರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ, ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ 1 ಬೈಕ್, 1 ಕಾರು ಜಖಂಗೊಂಡಿವೆ. ನೂರಕ್ಕೂ ಹೆಚ್ಚು ಜನರು ಜಮಾಯಿಸಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಗೋಕಾಕ್​ ಶಹರ್ ಠಾಣಾ ಪೊಲೀಸರು ಉದ್ರಿಕ್ತರನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ಈ ವೇಳೆ ಆರೋಪಿಗಳನ್ನು ಬಂಧಿಸುವಂತೆ ಮೃತನ ಕುಟುಂಬಸ್ಥರು ಪಟ್ಟು ಹಿಡಿದು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಗೋಕಾಕ್​ ಪಟ್ಟಣದಲ್ಲಿ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಪ್ರಕರಣ ಸಂಬಂಧ ಸ್ಥಳಕ್ಕೆ ಧಾವಿಸಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪರಿಸ್ಥಿತಿ ಹತೋಟಿಗೆ ತಂದಿದ್ದು, ಸದ್ಯ ವಾತಾವರಣ ತಿಳಿಯಾಗಿದೆ. ನಾನು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಗೋಕಾಕ್ ಶಹರ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್…

Spread the love ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್… ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ