ಪಟಾಕಿ ಅವಘಡ: ಬೆಂಗಳೂರಲ್ಲಿ ಗಾಯಗೊಂಡು 25 ಮಂದಿ

Spread the love

ಬೆಂಗಳೂರು: ದೀಪಾವಳಿ ಹಬ್ಬವನ್ನು ಸುರಕ್ಷಿತವಾಗಿ ಆಚರಿಸಲು ನಗರದಲ್ಲಿ ಸಾಕಷ್ಟು ಕ್ರಮ ಕೈಗೊಂಡಿದ್ದರೂ 25 ಪಟಾಕಿ ಅವಘಡ ಪ್ರಕರಣಗಳು ಬೆಳಕಿಗೆ ಬಂದಿದೆ.

 

ಆರೋಗ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿಯಿಂದ ಇಲ್ಲಿಯವರೆಗೆ ಏಳು ಜನರು ಪಟಾಕಿ ಸಂಬಂಧಿತ ಗಾಯಗಳ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಇಬ್ಬರು ಗಾಯಾಳುಗಳು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಐವರಿಗೆ ಓಪಿಡಿಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇವರಲ್ಲಿ 10 ವರ್ಷದ ಬಾಲಕಿ ಮತ್ತು 18 ವರ್ಷದ ಯುವಕನಿಗೆ ಗಂಭೀರ ಗಾಯಗಳಾಗಿವೆ.

ನಾರಾಯಣ ನೇತ್ರಾಲಯದಲ್ಲಿ ಪಟಾಕಿಯಿಂದ 16 ಮಂದಿ ಗಂಭೀರವಾಗಿ ಗಾಯಗೊಂಡವರು ಚಿಕಿತ್ಸೆಗೆ ದಾಖಲಾಗಿದ್ದಾರೆ. ಬೇರೆಯವರು ಸಿಡಿಸಿದ ಪಟಾಕಿಯಿಂದ ಗಾಯಗೊಂಡವರೇ ಹೆಚ್ಚಾಗಿದ್ದಾರೆ. ಇವರಲ್ಲಿ ಟೈಲರ್ ಒಬ್ಬರು ಮತ್ತು 19 ವರ್ಷದ ಯುವಕನಿಗೆ ಗಂಭೀರ ಗಾಯವಾಗಿದೆ. ಉಳಿದ ಗಾಯಾಳುಗಳಿಗೆ ಸಣ್ಣಪುಟ್ಟ ಚಿಕಿತ್ಸೆಯ ಅಗತ್ಯವಿದ್ದು, ನೀಡಲಾಗುತ್ತಿದೆ. ಮುಂದಿನ 48 ಗಂಟೆಗಳ ಕಾಲ ಗಾಯಾಳುಗಳ ಮೇಲೆ ಹೆಚ್ಚಿನ ನಿಗಾ ಇಡಲಾಗುತ್ತಿದ್ದು, ಅವರಿಗೆ ಯಾವುದೇ ಶಾಶ್ವತ ಹಾನಿಯಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಹಾಗೆಯೇ ಶಂಕರ ನೇತ್ರಾಲಯದಲ್ಲಿ ಎರಡು ಪಟಾಕಿ ಗಾಯದ ಪ್ರಕರಣ ವರದಿಯಾಗಿದೆ. ಇದರಲ್ಲಿ ಆರು ಮತ್ತು ಏಳು ವರ್ಷದ ಮಕ್ಕಳು ಪಟಾಕಿಯಿಂದ ಗಾಯಗೊಂಡಿದ್ದಾರೆ. ಪಟಾಕಿ ಹಚ್ಚುವುದನ್ನು ನೋಡುತ್ತಿದ್ದಾಗ ಏಳು ವರ್ಷದ ಹುಡುಗನಿಗೆ ಗಾಯಗಳಾಗಿದೆ.


Spread the love

About Laxminews 24x7

Check Also

Bigg Boss ಸೀಸನ್​-11ಕ್ಕೆ ಎಂಟ್ರಿ ಪಡೆದ ನಾಲ್ವರು ಸ್ಫರ್ಧಿಗಳು

Spread the love ಬೆಂಗಳೂರು: ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್​ಬಾಸ್ (Bigg Boss)​ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ