ದೇವೇಗೌಡರ ಆಶೀರ್ವಾದ ಪಡೆದ ವಿಜಯೇಂದ್ರ

Spread the love

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಬಿ.ವೈ. ವಿಜಯೇಂದ್ರ ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಪದ್ಮನಾಭನಗರದ ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ. ವಿಜಯೇಂದ್ರ ಅವರು, ಮಾಜಿ ಪ್ರಧಾನಮಂತ್ರಿ ದೇವೇಗೌಡರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯ ಕೋರಿ, ಅವರ ಆಶೀರ್ವಾದ ಪಡೆದಿದ್ದೇನೆ ಎಂದರು.

ಇಷ್ಟು ದೊಡ್ಡ ರಾಷ್ಟ್ರೀಯ ಪಕ್ಷದಲ್ಲಿ ಇಷ್ಟು ಚಿಕ್ಕ ವಯಸ್ಸಿಗೇ ದೊಡ್ಡ ಜವಾಬ್ದಾರಿ ಕೊಟ್ಟ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ. ತಂದೆಯವರಾದ ಯಡಿಯೂರಪ್ಪ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಿ ಸಂಘಟನೆಗೆ ಶಕ್ತಿ ತುಂಬಿದ ಮಾದರಿಯಲ್ಲಿ ನೀನು ಕೂಡ ಯಶಸ್ವಿ ಆಗುವಂತೆ ದೇವೇಗೌಡರು ಹರಸಿದರು ಎಂದು ತಿಳಿಸಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಾಗಿ, ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊಡದೆ ಹೆಚ್ಚು ಸ್ಥಾನವನ್ನು ಗೆಲ್ಲಬೇಕು. ಇದು ದೇಶದ ಭವಿಷ್ಯ ನಿರ್ಮಾಣದ ಚುನಾವಣೆ. ಯುವಕರು ಹೆಚ್ಚು ಹೆಚ್ಚಾಗಿ ಮುಂದೆ ಬರಬೇಕೆಂದು ಆಶೀರ್ವಾದ ಮಾಡಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

 ದೇವೇಗೌಡರ ಆಶೀರ್ವಾದ ಪಡೆದ ವಿಜಯೇಂದ್ರ

ದೇವೇಗೌಡರ ಭೇಟಿಯಿಂದ ತುಂಬಾ ಸಂತೋಷವಾಗಿದೆ. ರಾಜ್ಯದ ಮತ್ತು ದೇಶದ ಆಗುಹೋಗುಗಳ ಬಗ್ಗೆ ಅವರ ಚಿಂತನೆಗಳು ಪ್ರೇರಕ ಮತ್ತು ದೊಡ್ಡ ಶಕ್ತಿಯನ್ನು ಕೊಡುತ್ತದೆ ಎಂದ ಅವರು, ರಾಜ್ಯದಲ್ಲಿ ಹೋರಾಟ ಎಂಬ ಮಾತು ಬಂದಾಗ ದೇವೇಗೌಡರು ಮತ್ತು ಯಡಿಯೂರಪ್ಪ ಅವರು ನೆನಪಾಗುತ್ತಾರೆ. ಅದನ್ನು ಕೂಡ ಅವರು ನೆನಪು ಮಾಡಿಕೊಂಡರು ಎಂದು ತಿಳಿಸಿದರು. ಪಕ್ಷದ ಹಿತದೃಷ್ಟಿಯಿಂದ ದೇವೇಗೌಡರು ಮತ್ತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಸಲಹೆಗಳನ್ನು ತೆಗೆದುಕೊಂಡು, ಒಗ್ಗಟ್ಟಾಗಿ ನುಗ್ಗಿ ಕೆಲಸ ಮಾಡುತ್ತೇವೆ ಎಂದರು.


Spread the love

About Laxminews 24x7

Check Also

ದೀಪಾವಳಿ ಬಳಿಕ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಾಧ್ಯತೆ

Spread the love ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೀಪಾವಳಿ ಹಬ್ಬದ ಬಳಿಕ ಮತ್ತು ನವೆಂಬರ್‌ 26ರ ಮುನ್ನ ನಡೆಯುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ