Breaking News

ಎರಡು – ಮೂರು ದಿನಗಳಲ್ಲಿ ವಿಪಕ್ಷ ನಾಯಕರ ನೇಮಕ’: ಪ್ರಹ್ಲಾದ್ ಜೋಶಿ

Spread the love

ಹುಬ್ಬಳ್ಳಿ : ಡಿ.ಕೆ. ಶಿವಕುಮಾರ್​ ಮತ್ತೊಂದು ಪವರ್ ಸೆಂಟರ್ ಆಗಿರಬಾರದು ಎಂದು ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ಷಡ್ಯಂತ್ರ ನಡೆಯುತ್ತಿದೆ.

ಅವರವರ ಜಗಳದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಎರಡು – ಮೂರು ದಿನಗಳಲ್ಲಿ ವಿಪಕ್ಷ ನಾಯಕರ ನೇಮಕ’: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನಗರದ ತಮ್ಮ ಕಚೇರಿಯಲ್ಲಿ ಲಕ್ಷ್ಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಇದೊಂದು ನೆಗೆಟಿವ್​​ ಸರ್ಕಾರವಾಗಿ ಪರಿವರ್ತನೆಯಾಗಿದೆ. ಹಳ್ಳಿಗಳಿಗೆ, ರೈತರಿಗೆ ಸಮರ್ಪಕ ವಿದ್ಯುತ್​​ ಸಿಗುತ್ತಿಲ್ಲ. ವಿಪರೀತವಾದ ಒಳಜಗಳದಿಂದ ಆಡಳಿತ ಯಂತ್ರ ಸಂಪೂರ್ಣ ಹದಗೆಟ್ಟಿದೆ. ಎರಡು ಮೂರು ದಿನಗಳಲ್ಲಿ ವಿಪಕ್ಷ ನಾಯಕರ ನೇಮಕ ಆಗುತ್ತದೆ. ರಾಷ್ಟ್ರ ನಾಯಕರ ಜೊತೆ ಚರ್ಚಿಸಿ ಸದ್ಯದಲ್ಲಿಯೇ ಎರಡೂ ಸದನಗಳ ವಿಪಕ್ಷ ನಾಯಕರನ್ನು ಆಯ್ಕೆ ಮಾಡುತ್ತೇವೆ. ಸರ್ಕಾರದ ನಿಷ್ಕ್ರಿಯತೆ, ವೈಫಲ್ಯದ ವಿರುದ್ಧ ಹೋರಾಡುತ್ತೇವೆ ಎಂದರು.

ಮುಂದುವರೆದು, ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಒಂದು ವರ್ಗವನ್ನು ಕಡೆಗಣಿಸಲಾಗುತ್ತಿದೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ವರ್ಗಾವಣೆಯಲ್ಲಿ ಭ್ರಷ್ಟಾಚಾರ ಇದೆ ಎಂದು ಅವರದ್ದೇ ಪಕ್ಷದ ಶಾಸಕರು ಹೇಳಿದ್ದಾರೆ. 6 ತಿಂಗಳಲ್ಲಿ ಈ ಪ್ರಮಾಣದ ಆಡಳಿತ ವಿರೋಧಿ ಅಲೆ ನಿರ್ಮಾಣವಾಗುತ್ತದೆ ಎಂದು ನಾವು ಕೂಡಾ ಅಂದುಕೊಂಡಿರಲಿಲ್ಲ. ಜನ ಐದು ವರ್ಷ ಆಡಳಿತ ನಡೆಸಲು ಅವಕಾಶ ಕೊಟ್ಟಿದ್ದಾರೆ. ಸರಿಯಾಗಿ ಸರ್ಕಾರ ನಡೆಸಿ ಎಂದು ನಾನು ಕಾಂಗ್ರೆಸ್‌ನವರಿಗೆ ಆಗ್ರಹಿಸುತ್ತೇನೆ ಎಂದರು.


Spread the love

About Laxminews 24x7

Check Also

ಬಸವರಾಜ ಹೊರಟ್ಟಿ ವಿರುದ್ಧ FIR ದಾಖಲಿಸದ ಡಿಜಿಪಿ, ಎಸ್​ಪಿಗೆ ನೋಟಿಸ್​ ಜಾರಿ

Spread the loveಧಾರವಾಡದ ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿನ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ