Breaking News

ನಿಕಟಪೂರ್ವ ಅಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಅವರಿಂದ ಅಧಿಕಾರ ಸ್ವೀಕರಿಸಿ ಅಧಿಕೃತವಾಗಿ ಬಿ.ವೈ.ವಿಜಯೇಂದ್ರ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಅಲಂಕರಿಸಿದರು.

Spread the love

ಬೆಂಗಳೂರು: ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಕ್ಷೇತ್ರದ ಶಾಸಕ ಹಾಗು ರಾಜ್ಯ ಬಿಜೆಪಿಯ ಹಿರಿಯ ನಾಯಕ ಬಿ.ಎಸ್‌.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಇಂದು ಅಧಿಕಾರ ಸ್ವೀಕರಿಸಿದರು.

ಈ ಮೂಲಕ ರಾಜ್ಯ ಬಿಜೆಪಿಗೆ ಯುವ ನೇತಾರನ ಸಾರಥ್ಯ ಸಿಕ್ಕಿದೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಹಿರಿಯರ ಆಶೀರ್ವಾದ ಪಡೆದು, ನಳೀನ್​ ಕುಮಾರ್​ ಕಟೀಲ್ ಅವರಿಂದ ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು.

ಸಮಾರಂಭದಲ್ಲಿ ಭಾಗವಹಿಸಿ ಬಿ.ಎಸ್‌.ಯಡಿಯೂರಪ್ಪ ಮಾತನಾಡಿ, “ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಅವರ ಆದೇಶ ಮತ್ತು ಆಶೀರ್ವಾದದಂತೆ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ್ದಾನೆ. ಅಮಿತ್ ಶಾ ಅವರನ್ನು ಬೆಂಗಳೂರಿಗೆ ಕರೆಸಿ ಒಂದು ಲಕ್ಷ ಜನ ಸೇರಿಸಿ ಕಾರ್ಯಕ್ರಮ ಮಾಡುವ ಅಪೇಕ್ಷೆ ಇದೆ. ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನಾಗಿ ಘೋಷಣೆ ಮಾಡಿದ ಬಳಿಕ ರಾಜ್ಯದಲ್ಲಿ ಕಾರ್ಯಕರ್ತರ ಉತ್ಸಾಹ ಕಾಣುತ್ತಿದೆ. ಎಲ್ಲಾ ನಾಯಕರು ಬಂದು ವಿಜಯೇಂದ್ರಗೆ ಆಶೀರ್ವಾದ ಮಾಡಿದ್ದು ತುಂಬಾ ಸಂತೋಷವಾಗಿದೆ” ಎಂದರು.

ನಂತರ ಮಾತನಾಡಿದ ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, “ಎಲ್ಲ ಹಿರಿಯರ ಮಾರ್ಗದರ್ಶನದಲ್ಲಿ ನಾನು ನಾಲ್ಕು ವರ್ಷ ಕೆಲಸ ಮಾಡಿದ್ದೇನೆ. 18 ಬಾರಿ ರಾಜ್ಯ ಪ್ರವಾಸ ಮಾಡಿದ್ದೇನೆ. ಅಧಿಕಾರ ವಹಿಸಿಕೊಂಡ 6 ತಿಂಗಳಲ್ಲಿ ಕೋವಿಡ್ ಬಂತು. ಸೇವಾ ಹಿ ಸಂಘಟನ್ ಹೆಸರಿನಲ್ಲಿ ಕೋವಿಡ್ ವೇಳೆ ಸೇವೆ ಮಾಡಿದ್ದೇವೆ. ಅತಿ ಹೆಚ್ಚು ಮೋರ್ಚಾ, ಪ್ರಕೋಷ್ಠ ನಿರ್ಮಿಸಿ, ಕೆಲಸ ಮಾಡಿದ್ದೇವೆ. 4 ವರ್ಷ ಮೂರು ತಿಂಗಳು ಸತತ ಕೆಲಸ ಮಾಡುವಲ್ಲಿ ಯಶಸ್ವಿಯಾಗಿದ್ದೇನೆ. ಈಗ ನಾವೆಲ್ಲರೂ ವಿಜಯೇಂದ್ರರಿಗೆ ಸಹಕಾರ ಕೊಡುತ್ತೇವೆ. ಬಾಲ್ಯದಿಂದಲೇ ಅವರು ಸ್ವಯಂಸೇವಕ, ರಾಜ್ಯ ಉಪಾಧ್ಯಕ್ಷರಾಗಿ ಶಕ್ತಿ ತುಂಬಿದವರು. ಈಗ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರ ಗೆಲ್ಲುವುದೇ ನಮ್ಮ ಗುರಿ. ವಿಜಯೇಂದ್ರ ನೇತೃತ್ವದಲ್ಲಿ 28 ಲೋಕಸಭಾ ಗೆಲ್ಲುತ್ತೇವೆ ನಾವೆಲ್ಲ ಒಟ್ಟಾಗಿ ಹೋರಾಟ ಮಾಡುತ್ತೇವೆ” ಎಂದು ಹೇಳಿದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ