Breaking News

ಸಚಿವ ಸ್ಥಾನಕ್ಕೆ  ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೆ ಸಿ.ಟಿ. ರವಿ ದೆಹಲಿಗೆ ದೌಡಾಯಿಸಿದ್ದಾರೆ. 

Spread the love

ಬೆಂಗಳೂರು:    ಸಚಿವ ಸ್ಥಾನಕ್ಕೆ  ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೆ  ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ದೆಹಲಿಗೆ ದೌಡಾಯಿಸಿದ್ದಾರೆ. 

ಸಿ.ಟಿ. ರವಿ  ಅವರಿಗೆ ಇತ್ತೀಚಿಗೆ ಬಿಜೆಪಿ  ರಾಷ್ಟ್ರೀಯ  ಪ್ರಧಾನ ಕಾರ್ಯದರ್ಶಿ ಹುದ್ದೆ ಒಲಿದು ಬಂದಿದೆ. ಇದಾದ ಬೆನ್ನಲ್ಲೇ ಅವರು ತಮ್ಮ  ನಿಭಾಯಿಸುತ್ತಿದ್ದ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.  ಇದೀಗ  ಶನಿವಾರ ಸಂಜೆ  ಅವರ ರಾಜೀನಾಮೆ ಅಂಗೀಕಾರವಾಗಿದೆ.

ನಂತರ ಅವರು  ದೆಹಲಿಗೆ ದೌಡಾಯಿಸಿದ್ದು, ಪಕ್ಷದ ವರಿಷ್ಠರ ಜತೆ ಮಾತುಕತೆ ನಡೆಸಲಿದ್ದಾರೆ. ಕರ್ನಾಟಕ ಸೇರಿ ಇತರ ರಾಜ್ಯಗಳಲ್ಲಿ ಪಕ್ಷ ಸಂಘಟನೆ ಮತ್ತಿತರ ಜವಾಬ್ದಾರಿ ಕುರಿತಾಗಿಚರ್ಚೆ ನಡೆಸಲಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ