Breaking News

ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ಧ ಜಾತಿನಿಂದನೆ ದೂರು ದಾಖಲ

Spread the love

ಬಿಗ್ ಬಾಸ್ (Bigg Boss Kannada 10) ಸ್ಪರ್ಧಿ ತನಿಷಾ (Tanisha Kuppanda) ವಿರುದ್ಧ ಜಾತಿನಿಂದನೆ ದೂರು ದಾಖಲಾದ ಬೆನ್ನಲ್ಲೇ ಬಿಗ್ ಬಾಸ್ ಸ್ಟುಡಿಯೋಗೆ ಕುಂಬಳಗೋಡು ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ತನಿಷಾ ಕುಪ್ಪಂಡ- ಪ್ರತಾಪ್ ಇಬ್ಬರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಜಾತಿ ನಿಂದನೆ ವಿಚಾರವಾಗಿ ಎಸ್‌ಸಿಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಾದ ಬೆನ್ನಲ್ಲೇ ಬಿಗ್ ಬಾಸ್ ಸೆಟ್‌ಗೆ ತೆರಳಿ ಕುಂಬಳಗೋಡು ಪೊಲೀಸರಿಂದ ವಿಚಾರಣೆ ಮಾಡಲಾಗಿದ್ದು, ತನಿಷಾ ಧ್ವನಿ ಸ್ಯಾಂಪಲ್ ತೆಗೆದುಕೊಳ್ಳಲಾಗಿದೆ. ಪ್ರೋಮೋದಲ್ಲಿರುವ ಧ್ವನಿಗೂ, ಹಾಗೂ ದೂರುದಾರರು ನೀಡಿರುವ ಧ್ವನಿ ಬಗ್ಗೆ ಪರಿಶೀಲನೆ ಮಾಡಲಾಗಿದೆ.

ಇದೀಗ ಎರಡೂ ಮುದ್ರಿತ ಧ್ವನಿ ಕಲೆಕ್ಟ್ ಮಾಡಿರೋ ಪೊಲೀಸರು, ಈ ಸಂಭಾಷಣೆ ಕುರಿತಂತೆ ಪ್ರತಾಪ್‌ಗೂ ವಿಚಾರಣೆ ಮಾಡಲಾಗಿದೆ. ತನಿಷಾ ಮತ್ತು ಪ್ರತಾಪ್ ಹೇಳಿಕೆ ಪಡೆದಿರೋ ಪೊಲೀಸರ ಮುಂದಿನ ನಡೆಯೇನು? ಎಂದು ಕಾದುನೋಡಬೇಕಿದೆ.
ಜಾತಿ ನಿಂದನೆ ವಿಚಾರವಾಗಿ ಎಸ್‌ಸಿಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಷಾ ಕುಪ್ಪಂಡ ವಿರುದ್ಧ ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ ಪದ್ಮಾ ಎಂಬುವರಿಂದ ನವೆಂಬರ್ 12ರಂದು ಎಫ್‌ಐಆರ್ ದಾಖಲಿಸಿದ್ದರು. ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಅವಹೇಳನಕಾರಿ ಪದ ಬಳಕೆ ಬಗ್ಗೆ ತನಿಷಾ ವಿರುದ್ಧ ಆರೋಪ ಎದುರಾಗಿತ್ತು.

ಡ್ರೋನ್ ಪ್ರತಾಪ್‌ಗೆ (Drone Prathap) ಮಾತನಾಡುವ ಭರದಲ್ಲಿ ಪದಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರು ದಾಖಲಾಗಿದ್ದು, ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕು ಎಂದು ಆಗ್ರಹಿಸಿ ಎಸ್‌ಸಿಎಸ್ಟಿ ಕಾಯ್ದೆಯಡಿ ದೂರು ದಾಖಲಿಸಿದ್ದರು


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ