Breaking News

ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ನಾನೂ ಆಕಾಂಕ್ಷಿ, ನಾಳೆಯೇ ಹೆಸರು ಪ್ರಕಟವಾಗಲಿದೆ: ಆರ್ ಅಶೋಕ್

Spread the love

ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಆಯ್ಕೆ ಆಗಿ ಒಂದು ವಾರ ಕಳೆದಿದೆ. ಇದರ ಬೆನ್ನಲ್ಲೇ ಈವರೆಗೆ ಖಾಲಿ ಉಳಿದಿರುವ ಪ್ರತಿಪಕ್ಷ ನಾಯಕನ ಆಯ್ಕೆಗೆ ಕಸರತ್ತು ನಡೆದಿದೆ.”ಹೈಕಮಾಂಡ್ ವೀಕ್ಷಕರ ಸಮ್ಮುಖದಲ್ಲಿ ನಾಳೆ ಪ್ರತಿಪಕ್ಷ ನಾಯಕರ ಆಯ್ಕೆಯಾಗಲಿದೆ. ನನ್ನನ್ನೂ ಸೇರಿ ನಾಲ್ಕೈದು ಜನ ಆಕಾಂಕ್ಷಿಗಳಿದ್ದೇವೆ. ಪಕ್ಷ ಯಾರಿಗೇ ಅವಕಾಶ ನೀಡಿದರೂ ನಾನು ಸ್ವಾಗತ ಮಾಡುತ್ತೇನೆ. ಅವರಿಗೆ ಸಂಪೂರ್ಣ ಸಹಕಾರವನ್ನೂ ನೀಡುತ್ತೇನೆ” ಎಂದು ಮಾಜಿ ಡಿಸಿಎಂ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸ ಧವಳಗಿರಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಪಕ್ಷ ಯಾರನ್ನು ತೀರ್ಮಾನ ಮಾಡುತ್ತದೋ ಅವರಿಗೆ ಒಲಿಯುತ್ತದೆ. ನಾವಂತೂ ಅರ್ಜಿ ಹಾಕಿಲ್ಲ. ಅರ್ಜಿ ಹಾಕುವ ಸಂಸ್ಕೃತಿಯೂ ನಮ್ಮಲ್ಲಿ ಇಲ್ಲ. ಪಕ್ಷ ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಅವರನ್ನು ಘೋಷಣೆ ಮಾಡಿದೆ. ಪ್ರತಿಪಕ್ಷ ನಾಯಕ ಸ್ಥಾನ ಕೂಡಾ ಪ್ರಮುಖ ಹುದ್ದೆ. ಈಗಾಗಲೇ ಅಭಿಪ್ರಾಯ ಸಂಗ್ರಹಣೆ ಆಗಿದೆ. ನಾಳೆ ವೀಕ್ಷಕರು ಬಂದು ಘೋಷಣೆ ಮಾಡುವುದಷ್ಟೇ ಬಾಕಿ ಇದೆ‌. ಯಾರೇ ನೇಮಕ ಆದರೂ ನನ್ನ ತಕರಾರು ಇಲ್ಲ. ನನ್ನನ್ನೂ ಸೇರಿದಂತೆ ನಾಲ್ಕೈದು ಜ‌ನ ಆಕಾಂಕ್ಷಿಗಳಿದ್ದಾರೆ ಅಂತಾ ನನಗೂ ಗೊತ್ತಿದೆ. ನಿನ್ನೆ ನಾನು ಸುನೀಲ್ ಕುಮಾರ್ ಮತ್ತು ಅಶ್ವತ್ಥ ನಾರಾಯಣ ಅವರ ಜೊತೆ ಮಾತನಾಡಿದ್ದೇನೆ. ಯಾರಿಗೇ ಅವಕಾಶ ಸಿಕ್ಕರೂ ಸ್ವಾಗತಿಸಿ, ನಾನು ಸಹಕಾರ ನೀಡುತ್ತೇನೆ” ಎಂದರು.

ಯತೀಂದ್ರ ಸಿದ್ದರಾಮಯ್ಯ ದೂರವಾಣಿ ಮಾತುಕತೆ ವಿಡಿಯೋ ವೈರಲ್​ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಆರ್. ಅಶೋಕ್, ”ಯತೀಂದ್ರ ಬೆಳವಣಿಗೆ ಇವತ್ತಿಂದಲ್ಲ. ಕಾಗ್ರೆಸ್ ಸರ್ಕಾರ ಬಂದಾಗಿಲಿನಿಂದ ಸಿಎಂ ಅಧಿಕಾರವನ್ನು ಯತೀಂದ್ರ ಚಲಾಯಿಸುತ್ತಿರುವುದು ಜಗಜ್ಜಾಹೀರಾಗಿದೆ. ಈಗ ಬಂದಿರುವ ವಿಡಿಯೋ 10ನೇಯದ್ದೋ, 15ನೇಯದ್ದೋ ಇರಬೇಕು. ಕಾಂಗ್ರೆಸ್ ಅಂದರೆ, ಈ ರೀತಿ ದಂಧೆ ಮಾಡುವುದರಲ್ಲಿ ಎಕ್ಸ್​ಪರ್ಟ್. ಈ ವಿಡಿಯೋ ಬಗ್ಗೆ ತನಿಖೆಯಾಗಬೇಕು. ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕು” ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ