Breaking News

ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಜೊತೆ ಹಸೆಮಣೆ ಏರಿದ ವಾಸುಕಿ ವೈಭವ್

Spread the love

 ಸಂಗೀತ ನಿರ್ದೇಶಕ ವಾಸುಕಿ ವೈಭವ್ ಅವರಿಂದು ತಮ್ಮ ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಅವರ ಕೈ ಹಿಡಿದಿದ್ದಾರೆ.

‘ರಾಮಾ ರಾಮಾ ರೇ’ ಸಿನಿಮಾ ಮೂಲಕ ಸಂಗೀತ ನಿರ್ದೇಶಕನಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ವಾಸುಕಿ ವೈಭವ್ ತಮ್ಮ ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಜೊತೆ ಹಸೆಮಣೆ ಏರಿದ್ದಾರೆ.

ರಾಮಾ ರಾಮಾ ರೇ ಸಿನಿಮಾದ ಸಕ್ಸಸ್ ಜೊತೆ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡ ವಾಸುಕಿ ವೈಭವ್ ಅವರೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರು ಹಿರಿಯರ ಸಮ್ಮುಖದಲ್ಲಿ ಬೃಂದಾ ವಿಕ್ರಮ್ ಜೊತೆ ವಾಸುಕಿ ವೈಭವ್ ಅವರ ಕಲ್ಯಾಣ ಜರುಗಿದೆ. ಬಹುಕಾಲದ ಗೆಳತಿ ಜೊತೆ ಬಹಳ ಸರಳವಾಗಿ ಹಿಂದೂ ಸಂಪ್ರದಾಯದ ಪ್ರಕಾರ ವಾಸುಕಿ ವೈಭವ್​ ಮದುವೆ ಆಗಿದ್ದಾರೆ.

ಹಲವು ವರ್ಷಗಳ ಪ್ರೀತಿಗೆ ಮದುವೆ ಮುದ್ರೆ: ವಾಸುಕಿ ವೈಭವ್​ ಹಾಗೂ ಬೃಂದಾ ವಿಕ್ರಮ್​ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದರು. ಬೃಂದಾ ವಿಕ್ರಮ್​ ಅವರು ರಂಗಭೂಮಿ ಹಿನ್ನೆಲೆ ಹೊಂದಿದ್ದಾರೆ. ಶಿಕ್ಷಕಿ ಆಗಿಯೂ ಅವರು ಕೆಲಸ ಮಾಡುತ್ತಿದ್ದಾರೆ. ಹೆಚ್ಚಾಗಿ ವಾಸುಕಿ ಜೊತೆ ಬೃಂದಾ‌ ಕಾಣಿಸಿಕೊಳ್ಳುತ್ತಿದ್ದರು‌. ಅದರೆ ವಾಸುಕಿ ಮತ್ತು ಬೃಂದಾ ಅವರು ತಮ್ಮ ಪ್ರೀತಿಯ ಬಗ್ಗೆ ಸಾರ್ವಜನಿಕವಾಗಿ ಹೆಚ್ಚೇನೂ ಹೇಳಿಕೊಂಡಿರಲಿಲ್ಲ. ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಅಭಿಮಾನಿಗಳು ನವಜೋಡಿಗೆ ಶುಭಾಶಯ ಕೋರಿದ್ದಾರೆ.

 ವಾಸುಕಿ ವೈಭವ್ ಬೃಂದಾ ವಿಕ್ರಮ್ ಮದುವೆ”ಹೊಸ ಪಯಣ ಆರಂಭ ಆಗಿದೆ. ನಿಮ್ಮೆಲ್ಲರ ಆಶೀರ್ವಾದ ಮತ್ತು ಹಾರೈಕೆ ಬೇಕು” ಎಂದು ವಾಸುಕಿ ವೈಭವ್​ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇಷ್ಟು ದಿನಗಳ ಕಾಲ ವಾಸುಕಿ ವೈಭವ್​ ಅವರು ಮದುವೆ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಕಳೆದ ವಾರ ವಾಸುಕಿ ವೈಭವ್​ ಅವರ ಕುಟುಂಬದಲ್ಲಿ ಚಪ್ಪರ ಪೂಜೆ ಆರಂಭ ಆಗಿತ್ತು.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ