Home / ರಾಜಕೀಯ / ನರೇಗಾ ಯೋಜನೆಯಲ್ಲಿ ಮಾನವ ದಿನಗಳನ್ನ ಹೆಚ್ಚಿಸಲು ಕೇಂದ್ರಕ್ಕೆ ಮನವಿ: ಡಿಸಿಎಂ ಡಿ ಕೆ ಶಿವಕುಮಾರ್

ನರೇಗಾ ಯೋಜನೆಯಲ್ಲಿ ಮಾನವ ದಿನಗಳನ್ನ ಹೆಚ್ಚಿಸಲು ಕೇಂದ್ರಕ್ಕೆ ಮನವಿ: ಡಿಸಿಎಂ ಡಿ ಕೆ ಶಿವಕುಮಾರ್

Spread the love

ಬೆಂಗಳೂರು: “ಬರಗಾಲವಿರುವ ಕಾರಣ ನರೇಗಾ ಯೋಜನೆಯ ಮಾನವ ದಿನಗಳನ್ನು 100 ದಿನಗಳ ಬದಲು 150 ದಿನಗಳಿಗೆ ಏರಿಕೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಜಿಕೆವಿಕೆ ಆವರಣದಲ್ಲಿ ನಡೆದ ಕೃಷಿಮೇಳ- 2023ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕನಕಪುರ ತಾಲೂಕಿನಲ್ಲಿ ಪ್ರತಿ ರೈತರಿಗೂ ನರೇಗಾ ಯೋಜನೆಯ ಲಾಭ ದೊರೆಯುವಂತೆ ಮಾಡಿದ್ದೇನೆ. ಸಾಕಷ್ಟು ಜನ ರೈತರು ಕೊಟ್ಟಿಗೆ ಸೇರಿದಂತೆ ಸಾಕಷ್ಟು ಅನುಕೂಲ ಮಾಡಿಕೊಂಡಿದ್ದಾರೆ. ಇದರಿಂದ ಬಿಜೆಪಿ ಸರ್ಕಾರ ನಮ್ಮ ತಾಲೂಕಿಗೆ ಉತ್ತಮವಾಗಿ ನರೇಗಾ ಯೋಜನೆ ಬಳಸಿಕೊಂಡ ತಾಲೂಕು ಎಂದು ವಿಧಿಯಿಲ್ಲದೇ ಪ್ರಶಸ್ತಿ ನೀಡಬೇಕಾಯಿತು” ಎಂದರು.

 ಹೊಸ ಬೆಳೆ ತಳಿಗಳನ್ನು ಪರಿಶೀಲಿಸಿದ ಡಿಸಿಎಂ ಡಿ ಕೆ ಶಿವಕುಮಾರ್​

“ನಾನು ರಾಜ್ಯದ ಎಲ್ಲ ಸಂಸದರಿಗೆ ಮತ್ತು ರೈತರ ಮಕ್ಕಳು ಎಂದು ಹೇಳಿಕೊಂಡು ಬಿಜೆಪಿ ಜೊತೆ ಸೇರಿರುವವರ ಬಳಿ ಕೈ ಮುಗಿದು ಕೇಳುತ್ತೇನೆ, ಇಡೀ ರಾಜ್ಯದ ಇತಿಹಾಸದಲ್ಲಿ 200ಕ್ಕೂ ಹೆಚ್ಚು ತಾಲೂಕುಗಳು ಬರಕ್ಕೆ ತುತ್ತಾಗಿವೆ. ನರೇಗಾ ಯೋಜನೆ ಪ್ರಕಾರ ಬರಗಾಲ ಬಂದಾಗ ಮಾನವ ದಿನಗಳನ್ನು ಹೆಚ್ಚು ಮಾಡಬೇಕು ಎನ್ನುವ ಕಾನೂನಿದೆ. ಕೇಂದ್ರ ಸರ್ಕಾರಕ್ಕೆ ನೆನಪಿಸಿ, ನಮ್ಮ ರೈತರ ಬದುಕನ್ನು ಹಸನು ಮಾಡಬೇಕು” ಎಂದು ಹೇಳಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ