Breaking News

ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅವರನ್ನು ಅಮಾನತುಗೊಳಿಸಲಾಗಿದೆ.

Spread the love

ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆ ಸಿ ಎಂ ಇಬ್ರಾಹಿಂ ಅವರನ್ನು ಕೂಡಲೇ ಜಾರಿಗೆ ಬರುವಂತೆ ಜಾತ್ಯತೀತ ಜನತಾದಳ ಪಕ್ಷದಿಂದ ಅಮಾನತು ಮಾಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.

ಡಿ ದೇವೇಗೌಡರು ಆದೇಶ ಹೊರಡಿಸಿದ್ದಾರೆ.

 ಅಮಾನತು ಆದೇಶಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ), ಹಿಂದಿನ ಮಹಾಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನ ಪರಿಷತ್ ಸದಸ್ಯ ಎಸ್. ಎಲ್ ಬೋಜೇಗೌಡ ಅವರು ದಿನಾಂಕ: 19-10-2023ರ ವರದಿಯಲ್ಲಿ ಕರ್ನಾಟಕ ರಾಜ್ಯ ಪರಿಷತ್‌ ಪ್ರಸ್ತುತ ಕಾರ್ಯಕಾರಿ ಸಮಿತಿ, ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸಿರುವುದಿಲ್ಲ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೈಗೊಂಡಿರುವುದಿಲ್ಲ ಎಂದು ತಿಳಿಸಿದ್ದಾರೆ.

 ಅಮಾನತು ಆದೇಶಸಿ ಎಂ ಇಬ್ರಾಹಿಂ ಅವರು ಪಕ್ಷದ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿಲ್ಲ. ರಾಜ್ಯಾಧ್ಯಕ್ಷರು ಒಳಗೊಂಡಂತೆ ರಾಜ್ಯ ಪರಿಷತ್‌ನ ಕಾರ್ಯಕಾರಿ ಸಮಿತಿ ನಿಷ್ಕ್ರಿಯವಾಗಿರುವುದಾಗಿಯೂ ಸಹ ವರದಿಯಲ್ಲಿ ತಿಳಿಸಿದ್ದಾರೆ.

ಪಕ್ಷದ ಸಭೆಗಳಲ್ಲಿ ಪಕ್ಷದ ಹಿತದೃಷ್ಠಿಯಿಂದ ಮತ್ತು ಪಕ್ಷವನ್ನು ಸಂಘಟನೆ, ಬಲವರ್ದನೆ , ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಮೈತ್ರಿ/ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ ವಿಚಾರದ ಬಗ್ಗೆ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ. ಈ ಹೊಂದಾಣಿಕೆ ಬಗ್ಗೆ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಲು ಪಕ್ಷ ರಾಷ್ಟ್ರಾಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಿಗೆ ಅಧಿಕಾರ ನೀಡಲು ತೀರ್ಮಾನಿಸಲಾಗಿದೆ. ಈ ಮೇಲಿನ ಸಭೆಗಳಲ್ಲಿ ಸಿ. ಎಂ ಇಬ್ರಾಹಿಂ ಅವರು ಉಪಸ್ಥಿತರಿದ್ದು, ಚರ್ಚೆಯಲ್ಲಿ ಮತ್ತು ತೀರ್ಮಾನದಲ್ಲಿ ಪಾಲುದಾರರಾಗಿದ್ದರು. ತದನಂತರ ಈ ತೀರ್ಮಾನದ ವಿರುದ್ಧ ವಿರೋಧಾಭಾಸದ ಹೇಳಿಕೆ ನೀಡುತ್ತಿರುವುದಾಗಿ ವರದಿಯಾಗಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರನ್ನೊಳಗೊಂಡ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಸಂವಿಧಾನದ ಸೆಕ್ಷನ್​ 10 ರನ್ವಯ ದಿನಾಂಕ:19-10-2023ರಂದು ವಿಸರ್ಜನೆ ಮಾಡಿ ಆದೇಶ ಹೊರಡಿಸಲಾಗಿದೆ.


Spread the love

About Laxminews 24x7

Check Also

ರೈತರು ಉತ್ಪಾದಿಸುವ ಆಹಾರ ಧಾನ್ಯಗಳ ಖರೀದಿ ಜವಾಬ್ದಾರಿ ಎಫ್​​​ಸಿಐಗೆ ವಹಿಸಿ: ಈರಣ್ಣ ಕಡಾಡಿ

Spread the loveಬೆಂಗಳೂರು: ರೈತರು ಉತ್ಪಾದಿಸುವ ಆಹಾರ ಧಾನ್ಯಗಳನ್ನು ಖರೀದಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇದರ ಜವಾಬ್ದಾರಿಯನ್ನು ಭಾರತೀಯ ಆಹಾರ ನಿಗಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ