Breaking News

ನಮ್ಮ ಗ್ಯಾರಂಟಿ ಯೋಜನೆ ಕದ್ದು ಮೋದಿ ಪಂಚರಾಜ್ಯ ಚುನಾವಣೆ ಎದುರಿಸುತ್ತಿದ್ದಾರೆ: ಡಿ ಕೆ ಶಿವಕುಮಾರ್‌

Spread the love

ಬೆಂಗಳೂರು: ಪ್ರಧಾನಿ ಮೋದಿಯವರು ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಕದ್ದು ಪಂಚರಾಜ್ಯಗಳ ಚುನಾವಣೆ ಎದುರಿಸುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಲೇವಡಿ ಮಾಡಿದರು.

ಕೆಪಿಸಿಸಿ ಕಚೇರಿ ಭಾರತ್‌ ಜೋಡೋ ಸಭಾಂಗಣದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನಾಚರಣೆ ಮತ್ತು ಬೆಂಗಳೂರು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ದಳಕ್ಕೆ ಮತಹಾಕಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ವಾಪಸು ತೆಗೆದುಕೊಳ್ಳುವಂತಹ ಕಾನೂನು ತರುತ್ತಾರೆ. ಈ ವಿಚಾರಗಳನ್ನು ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ನಾಯಕರು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು.

ಗ್ಯಾರಂಟಿ ನಿಲ್ಲಿಸುವ ಕೆಲಸ ಕಾಂಗ್ರೆಸ್ ಮಾಡಲ್ಲ: ಬಿಜೆಪಿ ಮತ್ತು ದಳದವರು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರು. ಅವರ ಈ ಜನವಿರೋಧಿ ಬುದ್ಧಿಯನ್ನು ಮತದಾರರಿಗೆ ತಿಳಿಸುವ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲುಸುವುದಾಗಲಿ, ಕಡಿಮೆ ಮಾಡುವುದಾಗಲಿ ಯಾವುದನ್ನೂ ಸಹ ಕಾಂಗ್ರೆಸ್‌ ಸರ್ಕಾರ ಮಾಡುವುದಿಲ್ಲ. ಬಿಜೆಪಿಯವರು ಅಧ್ಯಕ್ಷರನ್ನಾಗಿ, ವಿರೋಧ ಪಕ್ಷದ ನಾಯಕರನ್ನಾಗಿ ಯಾರನ್ನಾದರೂ ಮಾಡಿಕೊಳ್ಳಲಿ. ಎಷ್ಟು ಜನರನ್ನು ಬೇಕಾದರೂ ಒಗ್ಗೂಡಿಸಲಿ. ಅದಕ್ಕೆ ತಲೆಕೆಡಿಸಿಕೊಳ್ಳಬೇಡಿ. ನಮಗೂ ಅದಕ್ಕೂ ಸಂಬಂಧವಿಲ್ಲ ಎಂದು ಡಿಕೆಶಿ ತಿಳಿಸಿದರು.

ಬ್ಲಾಕ್‌, ಜಿಲ್ಲಾ, ತಾಲೂಕು ಮಟ್ಟದ ಅಧ್ಯಕ್ಷರು, ಕಾರ್ಯಕರ್ತರು ಮತ್ತು ನಾಯಕರು ಬೂತ್‌ ಮಟ್ಟದಿಂದ ಗ್ಯಾರಂಟಿ ಯೋಜನೆಗಳ ಸಾಧಕ-ಬಾಧಕಗಳನ್ನು ಕಡ್ಡಾಯವಾಗಿ ತಿಳಿದುಕೊಂಡು, ಜನರಿಗೆ ಆಗುತ್ತಿರುವ ಅನಾನುಕೂಲ ಮತ್ತು ಅನುಕೂಲ ಎರಡನ್ನೂ ಸರ್ಕಾರದ ಗಮನಕ್ಕೆ ತರಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯೇ ಇಲ್ಲವೇ ಎಂದು ಖುದ್ದಾಗಿ ತಿಳಿಯಲು ಮಂತ್ರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

28ರಂದು ಗ್ಯಾರಂಟಿ ಸಮೀಕ್ಷೆ: ನ.28 ರಂದು ಕಾಂಗ್ರೆಸ್‌ ಸಂಸ್ಥಾಪನಾ ದಿನ. ಈ ದಿನ ಪಕ್ಷದ ವತಿಯಿಂದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯೇ ಎಂದು ಸಮೀಕ್ಷೆ ಮಾಡಲು ಸಮಿತಿ ರಚನೆ ಮಾಡಲಾಗುವುದು. ಮುಂದಿನ ನಾಲ್ಕು ವರ್ಷಗಳಲ್ಲಿ ಯಾರು ಇರುತ್ತಾರೆ ಎನ್ನುವುದೇ ಗೊತ್ತಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬವೂ ತಿಂಗಳಿಗೆ 5 ಸಾವಿರಕ್ಕೂ ಹೆಚ್ಚು ಹಣವನ್ನು ಉಳಿತಾಯ ಮಾಡುತ್ತಿದೆ. ಇಂತಹ ಚಿನ್ನದ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ಜನರಿಗೆ ಕಾರ್ಯಕರ್ತರು ಮನವರಿಕೆ ಮಾಡಬೇಕು ಎಂದರು.


Spread the love

About Laxminews 24x7

Check Also

ಕಿರಾವಾಳೆಯ ಗೋರಕ್ಷನಾಥ ಮಠದಲ್ಲಿ ಕಳ್ಳತನ

Spread the love ಕಿರಾವಾಳೆಯ ಗೋರಕ್ಷನಾಥ ಮಠದಲ್ಲಿ ಕಳ್ಳತನ ಖಾನಾಪೂರ ತಾಲೂಕಿನ ಗುಂಜಿ ಬಳಿಯಿರುವ ಕಿರಾವಾಳೆಯ ಪ್ರಸಿದ್ಧ ಗೋರಕ್ಷನಾಥ ಮಠದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ