Breaking News

ರಾಮನಗರ: ದರ್ಗಾದಲ್ಲಿ ವಿತರಿಸಿದ ಸಿಹಿ ಪ್ರಸಾದ ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Spread the love

ರಾಮನಗರ: ನಗರದ ದರ್ಗಾದಲ್ಲಿ ನೀಡಿದ ಸಿಹಿ ಪ್ರಸಾದ ತಿಂದು 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಭಾನುವಾರ ನಡೆದಿದೆ. ಎಂ.ಜಿ.ರಸ್ತೆಯಲ್ಲಿರುವ ಪಿಎಸ್‌ವಿ ದರ್ಗಾದಲ್ಲಿ ನಡೆಯುತ್ತಿದ್ದ ಗಂಧ ಮಹೋತ್ಸವದಲ್ಲಿ ಪ್ರಸಾದ ವಿತರಿಸಲಾಗಿದೆ.

ಪ್ರಸಾದ ಸೇವಿಸಿ ಸ್ವಲ್ಪ ಸಮಯದ ನಂತರ ಜನರ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ಕೆಲವರು ವಾಂತಿ ಮಾಡಿಕೊಂಡಿದ್ದಾರೆ. ತಕ್ಷಣವೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹಾಗು ಅಧಿಕಾರಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.


Spread the love

About Laxminews 24x7

Check Also

ಪೋಕ್ಸೋ ಪ್ರಕರಣದಲ್ಲಿ ಬಿಎಸ್​ವೈ ವಿರುದ್ಧ ವಿಚಾರಣೆ ಅಗತ್ಯವಿದೆ: ಹೈಕೋರ್ಟ್

Spread the love ಬೆಂಗಳೂರು: ಅಪ್ರಾಪ್ತೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮೇಲ್ನೋಟಕ್ಕೆ ವಿಚಾರಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ